11:58 AM Thursday 21 - August 2025

ಕುಡಿತದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡಿದ ಪೊಲೀಸ್ ಕಾನ್ಸ್‌ ಟೇಬಲ್!: ವಿಡಿಯೋ ವೈರಲ್

bablu gautam
12/11/2024

ಆಗ್ರಾ: ಪೊಲೀಸ್ ಕಾನ್ಸ್‌ ಟೇಬಲ್ ವೊಬ್ಬ ಪೊಲೀಸರ ಘನತೆಗೆ ಕುತ್ತು ತರುವಂತಹ ಕೆಲಸ ಮಾಡಿದ್ದಾನೆ.  ನೂರಾರು ಜನರು, ವಾಹನಗಳು ಸಂಚರಿಸುತ್ತಿರುವ ರಸ್ತೆಯಲ್ಲೇ ಎಲ್ಲರ ಎದುರೇ ಕುಡಿತದ ಮತ್ತಿನಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ.

ಇದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಘಟನೆಯಾಗಿದೆ. ಆಗ್ರಾದ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಹಿದ್ ನಗರ ಪೊಲೀಸ್ ಔಟ್ ಪೋಸ್ಟ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್  ಬಬ್ಲು ಗೌತಮ್ ಎಂಬಾತ ಸೋಮವಾರ ಬೆಳ್ಳಗ್ಗೆಯೇ ಜನಸಂದಣಿಯ ನಡುವೆಯೇ ನಡು ರಸ್ತೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ.

@priyarajputlive ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರು ಪೊಲೀಸ್ ಕಾನ್ಸ್ ಟೇಬಲ್  ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ನವೆಂಬರ್ 11ರಂದು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋ ಪೋಸ್ಟ್ ಆಗಿ ಒಂದೇ ದಿನದೊಳಗೆ 70 ಸಾವಿರಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಸಾಕಷ್ಟು ಜನರು ಪೊಲೀಸ್ ಕಾನ್ಸ್ ಟೇಬಲ್   ನ್ನು ತರಾಟೆಗೆತ್ತಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version