‘ಕಾವೇರಿ’ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು

ಚಾಮರಾಜನಗರ: ಕಾವೇರಿ ನೀರಿನ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆ.ಎಸ್.ಆರ್.ಪಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೋಹನ್(44) ಮೃತ. ದುರ್ದೈವಿ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ಉಂಟಾಗದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆಕ್ರಮವಾಗಿ ಕೆ.ಎಸ್.ಆರ್.ಪಿ ಮೈಸೂರು ಬೆಟಾಲಿಯನ್ 23 ಮಂದಿ ಕೊಳ್ಳೇಗಾಲದಲ್ಲಿ ಕರ್ತವ್ಯ ಮಾಡಲು ಕಳೆದ ಎರಡು ದಿನಗಳ ಹಿಂದೆ ಬಂದು ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು.
ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್ ನಲ್ಲಿ ತಂಗಿದ್ದ ಮುಖ್ಯಪೇದೆ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿ ಅಸುನೀಗಿದ್ದಾರೆ.ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತ ಮೋಹನ್
ಮಡಿಕೇರಿ ಜಿಲ್ಲೆಯ ನಾಪ್ಲೋಕು ಹೋಬಳಿಯ ಕಕ್ಕಬೇ ಗ್ರಾಮದ ಮೋಹನ್ ದವರು ಎಂದು ತಿಳಿದುಬಂದಿದೆ.