ಉಳ್ಳಾಲ: ಜ್ಯುವೆಲ್ಲರಿ ದರೋಡೆ ವಿಫಲಗೊಳಿಸಿದ ಪೊಲೀಸರು: “ಸಾಹೇಬ್ ಗಂಜ್” ಗ್ಯಾಂಗ್ ಅರೆಸ್ಟ್ - Mahanayaka
11:23 AM Sunday 15 - December 2024

ಉಳ್ಳಾಲ: ಜ್ಯುವೆಲ್ಲರಿ ದರೋಡೆ ವಿಫಲಗೊಳಿಸಿದ ಪೊಲೀಸರು: “ಸಾಹೇಬ್ ಗಂಜ್” ಗ್ಯಾಂಗ್ ಅರೆಸ್ಟ್

jewelery robbery
01/12/2022

ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಅಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಲ್ಲದೆ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನ. 29–30ರ ರಾತ್ರಿ ವೇಳೆ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ “ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು, ಮೂಲತಃ ಬಂಟ್ವಾಳ ತಾಲೂಕಿನ ಕನ್ಯಾನದ ಪ್ರಸ್ತುತ ಗುಜರಾತ್‌ನಲ್ಲಿ‌ ವಾಸವಾಗಿರುವ ಭಾಸ್ಕರ ಬೆಳ್ಚಪಾಡ(65), ನೇಪಾಳ‌‌ ಮೂಲದ ಪ್ರಸ್ತುತ ಗುಜರಾತ್‌ನ ದಿನೇಶ್ ರಾವಲ್ ಯಾನೆ ಸಾಗರ್ ಯಾನೆ ದಿಲ್ಲಿ(38),  ಜಾರ್ಖಂಡ್‌ನ ಮುಹಮ್ಮದ್ ಜಾಮೀಲ್ ಶೇಖ್ (29) ಮತ್ತು ಇಂಜಮಾಮ್ ಉಲ್ ಹಕ್(27), ಮೂಲತಃ ನೇಪಾಳದ ಬಿಸ್ತ ರೂಪ್ ಸಿಂಗ್ (34), ಕೃಷ್ಣ ಬಹದ್ದೂರ್ ಬೋಗಟ (41), ಜಾರ್ಖಂಡ್‌ನ ಇಮ್ದದುಲ್ ರಝಾಕ್ ಶೇಖ್, (32), ಬಿವುಲ್ ಶೇಖ್ (31), ಇಮ್ರಾನ್ ಶೇಖ್(30), ಎಂಬವರನ್ನು ಬಂಧಿಸಿದ್ದಾರೆ.

ಈ‌‌ ಮೂಲಕ ಜ್ಯುವೆಲ್ಲರಿ ದರೋಡೆಯನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿರುತ್ತಾರೆ.  ಈ ಆರೋಪಿಗಳೆಲ್ಲರೂ ಉತ್ತರ ಭಾರತ ಮೂಲದ ಕುಖ್ಯಾತ “ಸಾಹೇಬ್ ಗಂಜ್” ದರೋಡೆ ಗ್ಯಾಂಗ್ ನ ಸದಸ್ಯರಾಗಿದ್ದು, ತೊಕ್ಕೊಟ್ಟಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದು ನಂತರ ತೊಕ್ಕೊಟ್ಟು ಬಳಿಯ ಲಾಡ್ಜ್ ವೊಂದರಲ್ಲಿ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡು ದರೋಡೆಗೆ ಸಂಚು ರೂಪಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ