9:05 AM Wednesday 15 - October 2025

ಪೊಲೀಸರ ವಿರುದ್ಧ ತಿರುಗಿ ಬಿದ್ದ ಆಫ್ರಿಕಾ ಪ್ರಜೆಗಳು | ಲಾಠಿ ರುಚಿ ತೋರಿಸಿದ ಪೊಲೀಸರು

african people
02/08/2021

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಡ್ರಗ್ ಪೆಡ್ಲರ್ ಎನ್ನಲಾಗಿರುವ ಆಫ್ರಿಕಾದ ಪ್ರಜೆಯೋರ್ವ ಇಂದು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ವಿದೇಶಿ ಪ್ರಜೆಗಳು ಪೊಲೀಸರೊಂದಿಗೆ ಗೂಂಡಾವರ್ತನೆ ತೋರಿದ್ದು, ಈ ವೇಳೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

27 ವರ್ಷ ವಯಸ್ಸಿನ ಆಫ್ರಿಕಾ ಮೂಲದ ಜಾನ್ ಅಲಿಯಸ್ ಜೋಯಲ್ ಶಿಂದನಿ ಮಾಲು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದು, ಪೊಲೀಸ್ ಠಾಣೆಗೆ ಆತನನ್ನು ಕರೆತಂದ ಬಳಿಕ ಆತನಿಗೆ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 6:45ರ ವೇಳೆಗೆ ಆತನ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಡಿಸಿಪಿ ಧರ್ಮೇಂದ್ರ ಮೀನಾ ತಿಳಿಸಿದ್ದಾರೆ.

ಇನ್ನೂ ಆರೋಪಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು ಹಾಗೂ ಕುಟುಂಬಸ್ಥರು ಎನ್ನಲಾಗಿರುವ ವಿದೇಶಿ ಪ್ರಜೆಗಳು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಕೂಗಾಟ ನಡೆಸಿ, ಚಪ್ಪಾಳೆ ತಟ್ಟಿ ಪ್ರತಿಭಟಿಸಿದ್ದು, ಬಳಿಕ ಪೊಲೀಸರಿಗೆ ಅಶ್ಲೀಲ ಸನ್ನೆ ಮಾಡಿ, ಮಹಿಳಾ ಪೊಲೀಸರ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಅಟ್ಟಾಡಿಸಿ, ಲಾಠಿ ಬೀಸಿದ್ದು, ಈ ವೇಳೆ ಪ್ರತಿಭಟಿಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಇನ್ನೂ ವಿದೇಶಿ ಪ್ರಜೆಗಳು ಮಾಧ್ಯಮ ಸಿಬ್ಬಂದಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧಿಸಿದಂತೆ ಡಿಸಿಪಿ ಧರ್ಮೇಂದ್ರ ಮೀನಾ ಪ್ರತಿಕ್ರಿಯಿಸಿದ್ದು, ಗಲಾಟೆ ಮಾಡಿದ ಯಾರನ್ನೂ ಬಿಡುವುದಿಲ್ಲ,  ನಾವು ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಸಾವನ್ನಪ್ಪಿದ್ದಾನೆ. ಆ ವ್ಯಕ್ತಿಯ ಮೇಲೆ ಪೊಲೀಸರು ಹಲ್ಲೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಬೆಂಗಳೂರು ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಅನುಮಾನಾಸ್ಪದ ಸಾವು!

ಲಾಡ್ಜ್ ನಲ್ಲಿ ಬಾಲಕನ ಅತ್ಯಾಚಾರ | ಮದ್ರಸ ಶಿಕ್ಷಕನಿಗೆ 11 ವರ್ಷ ಜೈಲು

“ಕಸವು ಕಸದ ಬುಟ್ಟಿಗೆ ಸೇರಿತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ!

ಅನಾಥ ಹುಡುಗಿಯನ್ನು ಮಗಳಂತೆ ಸಾಕಿ, ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟ ಮುಸ್ಲಿಮ್ ಕುಟುಂಬ

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸಿಡಿ ಭೀತಿ!

ಒಂದು ದೇಹದಲ್ಲಿ ಎರಡು ಜೀವ | ಸರ್ಕಾರ ಮತ್ತು ಕಾನೂನಿಗೆ ಸವಾಲಾದ ಸಹೋದರರು

ಇತ್ತೀಚಿನ ಸುದ್ದಿ

Exit mobile version