7:51 PM Wednesday 22 - October 2025

ಬಿ.ಎಲ್.ಸಂತೋಷ್ ಭಾಷಣ ನಿಲ್ಲಿಸಿದ ಪೊಲೀಸ್ ಅಧಿಕಾರಿಗಳು!

b l santhosh
02/04/2023

ಕೊಪ್ಪಳ: ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ಎಲ್‌.ಸಂತೋಷ್​ ಭಾಷಣ ಮಾಡುತ್ತಿದ್ದಾಗಲೇ ಪೊಲೀಸರು ಪ್ರವೇಶ ಮಾಡಿ ಭಾಷಣ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಬಳ್ಳಾರಿ ವಿಭಾಗದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದ ಬಿ.ಎಲ್.ಸಂತೋಷ್, ಭಾಷಣದ ವೇಳೆ ನೋಟಿಸ್ ನೀಡಿದರೆ ನೀವು ಹೆದರಬೇಡಿ, ನಾನು ಎದುರಿಸುತ್ತೇನೆ ಎಂದು ಹೇಳುತ್ತಿದ್ದ ವೇಳೆಯೇ ಪೊಲೀಸರು ಎಂಟ್ರಿ ನೀಡಿದ್ದಾರೆ.

ಪರವಾನಿಗೆ ಸಮಯ ಮೀರಿದೆ ಭಾಷಣ ನಿಲ್ಲಿಸುವಂತೆ  ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಚುನಾವಣಾಧಿಕಾರಿಗಳಿಂದ ಪರವಾನಿಗೆ ಪಡೆದ ಸಮಯ ಮೀರಿ ಬಿಜೆಪಿ ಸಮಾವೇಶ ಮುಂದುವರೆಸಿತ್ತು. ಹಾಗಾಗಿ ಬಿ.ಎಲ್ ಸಂತೋಷ್​ ಭಾಷಣ ಮಾಡುತ್ತಿರುವಾಗ ವೇದಿಕೆಗೆ ಆಗಮಿಸಿ ಕಾರ್ಯಕ್ರಮ ನಿಲ್ಲಿಸಿ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೂಚನೆ ಮೇರೆಗೆ ಬಿ.ಎಲ್ ಸಂತೋಷ್​ ಭಾಷಣ ನಿಲ್ಲಿಸಿ ಕಾರ್ಯಕ್ರಮ ಮುಗಿಸಿದರು. ಈ ವೇಳೆ ಸಾವಿರಾರು ಕಾರ್ಯಕರ್ತರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version