ದನಗಳನ್ನು ಹಿಡಿಯಲು ರಸ್ತೆಗಿಳಿದ ಪೊಲೀಸರು: ಕಾರ್ಯಾಚರಣೆ ಹಿಂದಿದೆ ಈ ಗಂಭೀರ ಕಾರಣ! - Mahanayaka

ದನಗಳನ್ನು ಹಿಡಿಯಲು ರಸ್ತೆಗಿಳಿದ ಪೊಲೀಸರು: ಕಾರ್ಯಾಚರಣೆ ಹಿಂದಿದೆ ಈ ಗಂಭೀರ ಕಾರಣ!

chikkamagaluru
14/07/2024


Provided by

ಚಿಕ್ಕಮಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ ಹಿಡಿಯೋ ಕಾರ್ಯಾಚರಣೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆಯಿತು.

ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆ ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್.ಪಿ ವಿಕ್ರಮ್ ಅಮಟೆ ಹಿಡಿದರು.

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್, ಕೆ.ಎಂ.ರಸ್ತೆಯಲ್ಲಿ ಕಾರ್ಯಾಚರಣೆ  ನಡೆಯಿತು. ಒಟ್ಟು 4 ಹಸುಗಳನ್ನ ಹಿಡಿದ ಪೊಲೀಸರು  ಗೋಶಾಲೆಗೆ ಬಿಟ್ಟಿದ್ದಾರೆ.

ರಸ್ತೆಯಲ್ಲಿ ಹಸು ಅಡ್ಡ ಬಂದ ಕಾರಣ ಇಬ್ಬರು ಸಾವನ್ನಪ್ಪಿದ್ದಾರೆ.  ಬೈಕಿನಿಂದ ಬಿದ್ದಿರುವ 60ಕ್ಕೂ ಹೆಚ್ಚು ಬೈಕ್ ಸವಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಇದರ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅಮಾಯಕರ ಪ್ರಾಣ ರಕ್ಷಣೆಗೆ ಪೊಲೀಸರು ಕ್ರಮವಹಿಸಿದ್ದಾರೆ.

ಕಾರ್ಯಾಚರಣೆಗೆ ಪೊಲೀಸರ ಜೊತೆ ಅಗ್ನಿಶಾಮಕ ದಳ, ಪಶುಸಂಗೋಪನೆ ಇಲಾಖೆ ಸಾಥ್ ನೀಡಿತು .  ದನಗಳನ್ನು ಹಿಡಿದು ಗೋಶಾಲೆಗೆ ಕೊಂಡೊಯ್ದ ಪೊಲೀಸರು,  ದಂಡ ಕಟ್ಟಿ ದನಗಳನ್ನು ಬಿಡಿಸಿಕೊಂಡು ಹೋಗಲು ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಇನ್ನೊಂದು ಬಾರಿ ರಾಸುಗಳನ್ನ ರಸ್ತೆಗೆ ಬಿಟ್ಟರೆ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ  ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಹತ್ತಾರು ಸಿಬ್ಬಂದಿಗಳು ಭಾಗಿಯಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ