ಯುವಕನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲು ಕಾರ್ ನಲ್ಲಿ ರಿವಾಲ್ವರ್ ಇಟ್ಟ ಪೊಲೀಸರು: ವಿಡಿಯೋ ವೈರಲ್ - Mahanayaka

ಯುವಕನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲು ಕಾರ್ ನಲ್ಲಿ ರಿವಾಲ್ವರ್ ಇಟ್ಟ ಪೊಲೀಸರು: ವಿಡಿಯೋ ವೈರಲ್

bulandar
06/08/2024

ಬುಲಂದ್ ಶಹರ್: ಯುವಕನೊಬ್ಬನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲು ಉತ್ತರ ಪ್ರದೇಶ ಪೊಲೀಸರು ಮಾಡಿದ ಕೃತ್ಯ ಬೆಚ್ಚಿಬೀಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವಿಡಿಯೋ ವೈರಲ್ ಆಗಿದೆ.

ಯುವಕನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪೊಲೀಸರೇ ರಿವಾಲ್ವರ್ ನ್ನು ಮುಚ್ಚಿಟ್ಟು ತಂದು ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಇಟ್ಟಿದ್ದಾರೆ. ಸಿನಿಮಾದ ಸ್ಟೋರಿಯಂತೆ ಪೊಲೀಸರೇ ಈ ರೀತಿಯ ಸನ್ನಿವೇಶ ಸೃಷ್ಟಿ ಮಾಡಿರುವುದು ಆತಂಕ್ಕೆ ಕಾರಣವಾಗಿದೆ.

ಬೈಕಿನಲ್ಲಿ ಬರುವ ಇಬ್ಬರು ಪೊಲೀಸರ ಪೈಕಿ ಒಬ್ಬಾತ ಬಟ್ಟೆಯಿಂದ ಮುಚ್ಚಿಟ್ಟುಕೊಂಡಿದ್ದ ರಿವಾಲ್ವರನ್ನು ಯುವಕ ನಿಲ್ಲಿಸಿದ್ದ ಕಾರಿನಲ್ಲಿ ಇಟ್ಟಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪೊಲೀಸರು ಯಾವ ಕಾರಣಕ್ಕೆ ಈ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ