4:39 AM Saturday 15 - November 2025

ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ: ಮಾಜಿ ಮೇಯರ್ ಕವಿತಾ ಸನಿಲ್

kavith sunill
29/05/2023

ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಹಾಗೂ ದೆಹಲಿ ರಾಜ್ಯ ಸರ್ಕಾರ ಕ್ರೀಡಾಪಟುಗಳ ಮೇಲೆ ದೌರ್ಜನ್ಯ ಮಾಡಿರುವುದು ಸರಿಯಲ್ಲ. ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳ ಮೇಲೆ ಪೊಲೀಸ್ ದೌರ್ಜನ್ಯ ಅಮಾನುಷವಾದದ್ದು. ತಮ್ಮ ನ್ಯಾಯಕ್ಕಾಗಿ ಬೀದಿಗಿಳಿದು ಕ್ರೀಡಾಪಟುಗಳು ಹೋರಾಟ ಮಾಡುತ್ತಿದ್ದರು. ಇದೇ ವೇಳೆ ಈ ರೀತಿ ಹೋರಾಟವನ್ನು ಹತ್ತಿಕ್ಕುವುದು ಎಷ್ಟು ಸರಿ..? ಎಂದು ಪ್ರಶ್ನಿಸಿದರು.

ಕ್ರೀಡಾಪಟುಗಳು ಸಾಧನೆ ಮಾಡುವ ಹಾದಿ ಕಷ್ಟಕರ. ನಾನೊಬ್ಬ ಕ್ರೀಡಾಪಟುವಾಗಿ ಕ್ರೀಡಾಪಟುಗಳ ಕಷ್ಟ ಏನಿದೆ ಅನ್ನುವುದು ನನಗೆ ಗೊತ್ತು. ಲೈಂಗಿಕ ಕಿರುಕುಳ ಎಸಗಿದವರ ವಿರುದ್ಧ ಕೂಡಲೇ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡು ಬಂಧಿಸಬೇಕೆಂದು ಆಗ್ರಹಿಸಿದರು.

ಶೀಘ್ರದಲ್ಲೇ ಮಂಗಳೂರಲ್ಲಿ ಕೂಡಾ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮೋದಿ ಸರ್ಕಾರ ನ್ಯಾಯ ಒದಗಿಸುವ ಕೆಲಸ ಮಾಡಬೇಕೆಂದು ಹೇಳಿದರು.

 ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version