ಗಾಂಜಾ ಪ್ರಕರಣದ ಆರೋಪಿಗೆ ಪೊಲೀಸರಿಂದ ಕಾಲಿಗೆ ಗುಂಡು - Mahanayaka
2:06 AM Wednesday 3 - December 2025

ಗಾಂಜಾ ಪ್ರಕರಣದ ಆರೋಪಿಗೆ ಪೊಲೀಸರಿಂದ ಕಾಲಿಗೆ ಗುಂಡು

nazarullah
15/04/2025

ಶಿವಮೊಗ್ಗ:  ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ನಝರುಲ್ಲಾ ಎಂಬಾತ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ.

ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಗಾಂಜಾ ಪ್ರಕರಣ ದಾಖಲಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ