ಪೊಲೀಸರ ವಶದಲ್ಲಿರುವಾಗಲೇ ಗಾಂಜಾ ಪ್ರಕರಣದಲ್ಲಿ ಬಂಧಿತ ಆರೋಪಿ ಸಾವು - Mahanayaka

ಪೊಲೀಸರ ವಶದಲ್ಲಿರುವಾಗಲೇ ಗಾಂಜಾ ಪ್ರಕರಣದಲ್ಲಿ ಬಂಧಿತ ಆರೋಪಿ ಸಾವು

eranagowda
12/11/2022


Provided by

ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ಶಿಫಾರಸು ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ್ (45) ಸಾವನ್ನಪ್ಪಿದ ಆರೋಪಿ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಗಾಂಜಾ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸರು ಬಸನಗೌಡ ಈರನಗೌಡ ಪಾಟೀಲ್ನನ್ನು ಬಂಧಿಸಿ ಕರೆತರುವಾಗ ಕಾಕತಿ ಗ್ರಾಮದ ಮಾರ್ಗಮಧ್ಯೆಯೇ ಆತನ ಆರೋಗ್ಯ ಹದಗೆಟ್ಟಿದೆ.

ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ನೀಡಿ ಆತನ ಆರೋಗ್ಯ ಸುಧಾರಿಸಿದ ನಂತರ ಠಾಣೆಗೆ ಕರೆತಂದು ಮತ್ತೆ ವಿಚಾರಣೆಗೆ ಒಳಪಡಿಸುವ ಸಮಯದಲ್ಲಿ ಆರೋಪಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಆರೋಪಿಯನ್ನು ಬೀಮ್ಸ್ಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಆರೋಪಿ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ