ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ: ಎಸ್.ಟಿ.ಸೋಮಶೇಖರ್ ವಿರುದ್ಧ ಸಿ.ಟಿ.ರವಿ ಕಿಡಿ - Mahanayaka

ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ: ಎಸ್.ಟಿ.ಸೋಮಶೇಖರ್ ವಿರುದ್ಧ ಸಿ.ಟಿ.ರವಿ ಕಿಡಿ

c t ravi
27/02/2024

ಚಿಕ್ಕಮಗಳೂರು : ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಹಿನ್ನೆಲೆ ಪ್ರತಿಕ್ರಿಯಿಸಿದ ರವಿ, ವ್ಯಕ್ತಿ ಸಂಬಂಧಕ್ಕೋಸ್ಕರ ರಾಜೀ ರಾಜಕಾರಣ ಒಳ್ಳೆಯದ್ದಲ್ಲ ಎಂದರು.

ಅವಕಾಶವಾದಿಗಳಿಗೆ ಸಪೋರ್ಟ್ ಮಾಡೋದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಠಿಸಿದಂತೆ, ಪಕ್ಷ-ಪಕ್ಷ ಅನ್ನೋ ನಾವು ಪ್ರಶ್ನೆಗಳಿಗೆ ಒಳಗಾಗ್ತೀವಿ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ, ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗ್ತಾರೆ, ಹಾರ್ಡ್ ಕೋರ್, ಸಿದ್ಧಾಂತಕ್ಕೆ ರಾಜಕಾರಣ ಮಾಡೋರು ನಿಷ್ಠೂರಕ್ಕೆ ಒಳಗಾಗ್ತಾರೆ, ಇಂಥವರು ನಮ್ಮ ಪಕ್ಷದ ಸಿಎಂ ಬೇರೆ ಪಕ್ಷದ ಸಿಎಂ ಬಳಿಯೂ ಚೆನ್ನಾಗಿರ್ತಾರೆ ಎಂದು ಅವರು ಹೇಳಿದರು.

ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು, ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡೋದು ಶೂನ್ಯ ಸಹನೆ ಎಂದು ಅವರು ಟೀಕಿಸಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ