ಉತ್ತರ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು..?: ಸಿಎಂ ಯೋಗಿ, ಡಿಸಿಎಂ ಮೌರ್ಯ ಮಧ್ಯೆ ಆಂತರಿಕ ಸಮರ..!

17/07/2024

ಲೋಕಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ರಾಜಕೀಯ ಘಟನೆಗಳು ಒಂದರ ನಂತರ ಒಂದರಂತೆ ಬದಲಾಗುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ನಡುವಿನ ಸಂಬಂಧ ಹದಗೆಟ್ಟಿದೆ ಎಂಬ ವರದಿಗಳು ಸುದ್ದಿಯಲ್ಲಿವೆ. ಹೀಗಾಗಿ ಯುಪಿಗೆ ಸಂಬಂಧಿಸಿದಂತೆ ಬಿಜೆಪಿ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಮನಸ್ಥಿತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಮೌರ್ಯ ಅವರ ದೆಹಲಿ ಪ್ರವಾಸದ ನಂತರ ಊಹಾಪೋಹಗಳು ತೀವ್ರಗೊಂಡಿವೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಒಂದು ಗಂಟೆ ಕಾಲ ನಡೆದ ಚರ್ಚೆಯ ನಂತರ ಯುಪಿಯ ಬೆಳವಣಿಗೆ ಬಹಳ ಕುತೂಹಲ ಮೂಡಿಸಿದೆ.

ಸದ್ಯಕ್ಕಂತೂ ಉತ್ತರ ಪ್ರದೇಶದ ರಾಜಕೀಯ ಸನ್ನಿವೇಶ ಬಿಸಿಯಾಗಿದೆ. ಭಾನುವಾರ ಲಕ್ನೋದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದ ನಂತರ, ಬಿಜೆಪಿಯೊಳಗೆ ಪ್ರಕ್ಷುಬ್ಧತೆ ತೀವ್ರಗೊಂಡಿದೆ. ಕೇಶವ್ ಪ್ರಸಾದ್ ಮೌರ್ಯ ಅವರು ಈ ಸಮ್ಮೇಳನದಲ್ಲಿ ಸಂಘಟನೆಯು ಸರ್ಕಾರಕ್ಕಿಂತ ಮೇಲಿದೆ ಮತ್ತು ಹಾಗೆಯೇ ಉಳಿಯುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅತ್ತ ಸರ್ಕಾರದ ನಡವಳಿಕೆ ಬದಲಾಗುವುದಿಲ್ಲ ಎಂದು ಸಿಎಂ ಯೋಗಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಈ ಸಮಾವೇಶದ ನಂತರ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಯುಪಿ ಬಿಜೆಪಿ ಅಧ್ಯಕ್ಷ ಭೂಪೇಂದ್ರ ಚೌಧರಿ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು. ಮಂಗಳವಾರ ರಾತ್ರಿ ಮೌರ್ಯ ಅವರು ಜೆ.ಪಿ.ನಡ್ಡಾ ಅವರೊಂದಿಗೆ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ನಂತರ ಭೂಪೇಂದ್ರ ಚೌಧರಿ ಅವರೊಂದಿಗೆ ಸಭೆ ನಡೆಸಿದರು. ಈ ಸಭೆಯ ನಂತರ ಯುಪಿಗೆ ಸಂಬಂಧಿಸಿದ ನಿರ್ಣಾಯಕ ನಿರ್ಧಾರಗಳನ್ನು ಶೀಘ್ರದಲ್ಲೇ ಘೋಷಿಸಬಹುದು ಎಂಬ ವದಂತಿಗಳಿವೆ.

ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆ ರಾಜಕೀಯ ಚರ್ಚೆಗಳನ್ನು ಹುಟ್ಟುಹಾಕಿದೆ. ಈ ಕುರಿತು ಮಾಜವಾದಿ ಪಕ್ಷದ ನಾಯಕ ಮನೋಜ್ ಕಾಕಾ ಮಾತನಾಡಿ, ಮೌರ್ಯ ಅವರು ಸಿಎಂ ಯೋಗಿಗಿಂತ ದೊಡ್ಡವರು ಎಂದು ಪ್ರತಿಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಮೌರ್ಯ ಅವರು ಯೋಗಿಗೆ ಸವಾಲು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು. ಬಿಜೆಪಿ ಸಂಘಟನೆಯಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಬ್ರಜೇಶ್ ಪಾಠಕ್ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರನ್ನು ರಾಜ್ಯದ ಮುಖ್ಯಮಂತ್ರಿಗಳಾಗಿ ಘೋಷಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version