ರಸ್ತೆ ಗುಂಡಿಯಲ್ಲಿ ಸಂಚಾರವೇ ಸಾಹಸ: ಕೊಟ್ಟಿಗೆಹಾರ – ಗಂಗಮೂಲ ರಸ್ತೆ ದುಸ್ಥಿತಿಯಿಂದ ಬೇಸತ್ತ ಜನ
	
	
	
	
	
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಗಂಗಮೂಲಕ್ಕೆ ಸಾಗುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚಾರವೇ ಸಾಹಸದಂತಾಗಿದೆ.
ರಸ್ತೆಯಾದ್ಯಂತ ಉಂಟಾದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನಗಳು ಓಡಿಸುವುದು ಕಷ್ಟವಾಗಿದ್ದು, ಹಲವು ಸ್ಥಳಗಳಲ್ಲಿ ಅಪಘಾತ ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸದ್ಯಕ್ಕೆ ನಿಡುವಳೆ ಗ್ರಾಮಸ್ಥರು, ಆಟೋ ಮಾಲೀಕರು ಹಾಗೂ ಚಾಲಕರು ತಾತ್ಕಾಲಿಕವಾಗಿ ಗುಂಡಿಗಳಿಗೆ ಮಣ್ಣನ್ನು ತುಂಬಿ ಸಂಚಾರಕ್ಕೆ ಅನುಕೂಲ ಮಾಡಿಕೊಳ್ಳುತ್ತಿದ್ದಾರೆ. ಆದರೆ ಶೀಘ್ರದಲ್ಲೇ ರಸ್ತೆ ದುರಸ್ತಿ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ನಿಡುವಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ. ರಸ್ತೆ ದುರಸ್ತಿ ಮಾಡುವಂತೆ ಹಲವಾರು ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಸದ್ಯದಲ್ಲೇ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬ್ಯಾಂಡ್ ರವಿ, ಸಾಗರ್, ಯೋಗೇಶ್, ಪ್ರವೀಣ್, ಚೇತನ್ ಶರ್ಮ ಹಾಗೂ ನವೀನ್ ಹಾವಳಿ ಸೇರಿದಂತೆ ಅನೇಕರು ಹಾಜರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























