ರಸ್ತೆಯ ಗುಂಡಿಗೆ ಹಾಕಿದ ತೇಪೆ ಎದ್ದೇಳುತ್ತಿದೆ: ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ
ಉಡುಪಿ: ಬೀಡಿನಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಬರುವ ನಿರಾಶ್ರಿತರ ಪುರ್ನವಸತಿ ಕೇಂದ್ರದ ಬಳಿಯ ತಿರುವು ರಸ್ತೆಯಲ್ಲಿ ಹೊಂಡ ಗುಂಡಿಗಳಿಗೆ ತೇಪೆ ಹಾಕಿದ್ದು, ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ದೂರಿದ್ದಾರೆ.
ಈಗಲೇ ಡಾಂಬರು ಮಿಶ್ರಣ ಸರಿ ಪ್ರಮಾಣದಲ್ಲಿಲ್ಲದೆ ತೇಪೆಗಳು ಎದ್ದೇಳುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವು ವರ್ಷಗಳಿಂದ ನಿರಾಶ್ರಿತರ ಪುರ್ವಸತಿ ಕೇಂದ್ರದ ಬಳಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿಲೇ ಇರುತ್ತದೆ. ಹಾಕಿದ ತೇಪೆ ಕಳಪೆ ಕಾಮಗಾರಿಯಿಂದಾಗಿ ಒಂದು ತಿಂಗಳು ಸರಿಯಾಗಿ ನಿಲ್ಲುತ್ತಿದಿಲ್ಲ. ಮತ್ತೆ ಯಥಾಪ್ರಕಾರ ಗುಂಡಿಗಳು ಸೃಷ್ಟಿಯಾಗುತ್ತಲೇ ಇರುತ್ತವೆ.
ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದೆ. ನಗರಸಭೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವೇ ಸೂಕ್ತ ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka