ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕಿದ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

prajwal revanna.jpg
13/08/2026

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್ನಲ್ಲಿ ಮೊಬೈಲ್ ಫೋನ್ ಸೇರಿ ಹಲವು ವಸ್ತುಗಳು ಪತ್ತೆಯಾಗಿರುವುದು ಆಘಾತಕಾರಿ ಮಾಹಿತಿಯನ್ನು ಹೊರಹಾಕಿದೆ.

ದಾಳಿಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಇದ್ದ ಸೆಲ್ನಲ್ಲಿ ರೆಡ್ ಮಿ ಮೊಬೈಲ್, ಚಾರ್ಜರ್, ಪೆನ್ ಡ್ರೈವ್ ಹಾಗೂ ಪಾಕೆಟ್ ನೋಟ್ಬುಕ್ ಸಿಕ್ಕಿವೆ. ಅಷ್ಟೇ ಅಲ್ಲದೆ, ಈ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳು ಹಾಗೂ ಪತ್ರಿಕೆಗಳಿಂದ ಕತ್ತರಿಸಲಾದ ಯುವತಿಯರ ಅಶ್ಲೀಲ ಫೋಟೋಗಳ ಕಟಿಂಗ್ಗಳು ಪತ್ತೆಯಾಗಿವೆ. ಈ ಘಟನೆಯ ಬೆನ್ನಲ್ಲೇ ಭದ್ರತಾ ಹಿತದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣವೇ ವಿಐಪಿ ಸೆಲ್ನಿಂದ ಜನರಲ್ ಸೆಲ್ ಗೆ ಸ್ಥಳಾಂತರ ಮಾಡಲಾಗಿದೆ.

ಅಧಿಕಾರಿಗಳು ನಡೆಸಿದ ವಿಚಾರಣೆ ವೇಳೆ, ಪತ್ತೆಯಾದ ಪಾಕೆಟ್ ನೋಟ್ಬುಕ್ ತನಗೆ ಸೇರಿದ್ದು ಎಂದು ಪ್ರಜ್ವಲ್ ರೇವಣ್ಣ ಒಪ್ಪಿಕೊಂಡಿದ್ದಾರೆ. ಆದರೆ ಅಲ್ಲಿ ಸಿಕ್ಕ ಮೊಬೈಲ್ ಫೋನ್, ಚಾರ್ಜರ್ ಮತ್ತು ಪೆನ್ ಡ್ರೈವ್ ತನ್ನದೆಂದು ಮತ್ತೊಬ್ಬ ವಿಚಾರಣಾಧೀನ ಕೈದಿ ಪ್ರತಾಪ್ ರೈ ಹೇಳಿಕೊಂಡಿದ್ದಾನೆ.

ತನ್ನ ಸಂಬಂಧಿಕರು ಹಾಗೂ ವಕೀಲರನ್ನು ಸಂಪರ್ಕಿಸಲು ಈ ಫೋನ್ ಬಳಸುತ್ತಿದ್ದಾಗಿ ಪ್ರತಾಪ್ ರೈ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕಾನೂನುಬಾಹಿರವಾಗಿ ಮೊಬೈಲ್ ಇಟ್ಟುಕೊಂಡಿದ್ದ ವಿಚಾರಣಾಧೀನ ಕೈದಿ ಪ್ರತಾಪ್ ರೈ ವಿರುದ್ಧ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

Exit mobile version