11:24 AM Saturday 23 - August 2025

ಹುತ್ತಕ್ಕೆ ಹಾಲಿನ ಜೊತೆಗೆ ಕೋಳಿ ರಕ್ತ, ಮೊಟ್ಟೆ…!

shashti
29/11/2022

ಚಾಮರಾಜನಗರ: ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತವನ್ನು ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೋಳಿ ರಕ್ತ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದು ಬಂದಿದೆ.

ಚಾಮರಾಜನಗರದ ಉಪ್ಪಾರ ಬಡಾವಣೆ, ಮಲ್ಲಯ್ಯನಪುರ, ಉತ್ತುವಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿ ಹೀಗೆ ಬಹುತೇಕ ಕಡೆ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಹುತ್ತಕ್ಕೆ ಕೋಳಿ ಬಲಿ ಕೊಟ್ಟು ನಾಗಪ್ಪನಿಗೆ ನಮಿಸಿ, ಇಷ್ಟಾರ್ಥ ಈಡೇರಿಕೆಗೆ ಬೇಡಿದ್ದಾರೆ.

ಬಹುಪಾಲು ಮಂದಿ ಕೃಷಿ ಚಟುವಟಿಕೆಯನ್ನೇ ನಂಬಿರುವುದರಿಂದ ಸರ್ಪಗಳು ತಮಗೆ ತೊಂದರೆ ಕೊಡದಿರಲೆಂದು ಕೋಳಿ ಬಲಿ ಕೊಟ್ಟು ಕೋಳಿ ತಲೆ, ಮೊಟ್ಟೆಯನ್ನು ಹುತ್ತದೊಳಗೆ ಹಾಕುತ್ತಾರೆ. ಭಯ ಭಕ್ತಿಯಿಂದ ಈ ಹಬ್ಬ ಆಚರಿಸಲಿದ್ದು, ಪೂಜೆಯಾಗುವರೆಗೂ ಒಂದು ಹನಿ ನೀರನ್ನು ಕುಡಿಯುವುದಿಲ್ಲ ಎನ್ನುತ್ತಾರೆ ನಗರದ ಉಪ್ಪಾರ ಯುವಕರ ಸಂಘದ ಜಯಕುಮಾರ್.

ಈ  ರೀತಿ ಕೋಳಿ ಬಲಿಕೊಟ್ಟರೇ ಸರ್ಪ ಸಂಬಂಧದ ತೊಂದರೆ ನಿವಾರಣೆ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ. ಇಷ್ಟಾರ್ಥ ಈಡೇರಿದ ಬಳಿಕ ನಾಗಪ್ಪನಿಗೆ ಕೋಳಿ ಬಲಿ ಕೊಟ್ಟು ಹರಕೆ ತೀರಿಸುತ್ತೇವೆ ಎಂಬುದು ಭಕ್ತರ ನಂಬಿಕೆ. ಒಟ್ಟಿನಲ್ಲಿ, ಹುತ್ತಕ್ಕೆ ಕೋಳಿ ಬಲಿ ಎಂಬುದು ವಿಲಕ್ಷಣವಾಗಿ ಕಂಡರೂ ಭಯ-ಭಕ್ತಿ ಹಾಗೂ ನಂಬಿಕೆಯಿಂದ ಗ್ರಾಮಸ್ಥರು ಷಷ್ಠಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version