ಮ್ಯಾನ್ಮಾರ್ ನಲ್ಲಿ ಪ್ರಬಲ ಭೂಕಂಪ: 60 ಮಂದಿ ಸಾವು, 250ಕ್ಕೂ ಅಧಿಕ ಮಂದಿಗೆ ಗಾಯ, ಅನೇಕರು ನಾಪತ್ತೆ

ಮ್ಯಾನ್ಮಾರ್: ಮ್ಯಾನ್ಮಾರ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಭೂಕಂಪಕ್ಕೆ 60 ಮಂದಿ ಬಲಿಯಾಗಿ 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅನೇಕ ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಮ್ಯಾನ್ಮಾರ್ ನಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಿಸಿದೆ.
ಮ್ಯಾನ್ಮಾರ್ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಮೋನಿವಾ ನಗರದಿಂದ ಸುಮಾರು 50 ಕಿ.ಮೀ. ಪೂರ್ವದಲ್ಲಿ ಇದು ಇದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಥೈಲ್ಯಾಂಡ್ ನಲ್ಲಿಯೂ ಭೂಕಂಪನಕ್ಕೆ ನಾಲ್ವರು ಬಲಿಯಾಗಿದ್ದಾರೆ. 81 ಜನರು ನಾಪತ್ತೆಯಾಗಿದ್ದಾರೆ. 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಅನೇಕ ಸಾವು ನೋವುಗಳು ವರದಿಯಾಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7