ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಡೊಂಕಾಗುತ್ತಿದೆ: ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯ - Mahanayaka
12:01 AM Wednesday 15 - October 2025

ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಡೊಂಕಾಗುತ್ತಿದೆ: ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯ

subramanian swamy
17/03/2022

ಬೆಂಗಳೂರು: ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿಯು ಡೊಂಕಾಗುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯವಾಡಿದ್ದಾರೆ.


Provided by

ರಷ್ಯಾ- ಉಕ್ರೇನ್‌ ಸಂಘರ್ಷಕ್ಕೆ ಸಂಬಂಧಿಸಿ ಮೋದಿ ಸರ್ಕಾರ ಕೈಗೊಂಡಿರುವ ನಿಲುವಿನ ಬಗ್ಗೆ ವ್ಯಂಗ್ಯ ಮಾಡಿರುವ ಸುಬ್ರಮಣಿಯನ್‌ ಸ್ವಾಮಿ, ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಕೈಗೊಳ್ಳಲಾದ ನಿರ್ಣಯದಿಂದ ದೂರ ಉಳಿದಿದ್ದಲ್ಲದೆ, ರಷ್ಯಾದಿಂದ ರಿಯಾಯಿತಿ ದರದ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ನಮ್ಮ ನೆಲವನ್ನು ಚೀನಾ ಆಕ್ರಮವಾಗಿ ಕಬಳಿಸಿಕೊಂಡಿದೆ. ಹೀಗಿದ್ದೂ ಅಲ್ಲಿನ ವಿದೇಶಾಂಗ ಸಚಿವರು ಶೀಘ್ರದಲ್ಲೆ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಚೀನಾ -ಭಾರತದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವರು ಭಾರತಕ್ಕೆ ಭೇಟಿ ನೀಡಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಅಲ್ಲದೆ, ನಿಮಗೇನು ಬೇಕು ಎಂಬುದನ್ನು ಸರಿಯಾಗಿ ಹೇಳಿ, ಎಂಬ ಟ್ವೀಟರ್‌ ಬಳಕೆದಾರರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್‌ ಸ್ವಾಮಿ, ಅಂತಹ ಸಭೆಗೂ ಮೊದಲು ಭಾರತ ಮಾತೆಯ ಭೂಮಿ ವಾಪಾಸ್‌ ಬೇಕು ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಏರ್‌ಪೋರ್ಟ್‌ ನಲ್ಲಿ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ

ಪಿಲ್ಲರ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನ

ಶಾಲಾ ,ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ

7 ವರ್ಷದ ಬಾಲಕಿಯ ಅತ್ಯಾಚಾರದ ಆರೋಪಿಗಳ ಎನ್ ಕೌಂಟರ್

ಲಾಡ್ಜ್ ನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

 

ಇತ್ತೀಚಿನ ಸುದ್ದಿ