ಬಿಜೆಪಿಯಲ್ಲೇ ಇರ್ತಾರೆ: ಸುಮಲತಾ ಅಂಬರೀಶ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರಹ್ಲಾದ್ ಜೋಷಿ ಉತ್ತರ

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಯಲ್ಲೇ ಇರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.
ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ. ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ. ನಮಗೆ ಆ ವಿಶ್ವಾಸವಿದೆ ಎಂದು ಅವರು ಪ್ರತಿಕ್ರಿಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth