ಪ್ರಜ್ವಲ್ ಕೇಸ್: ಪ್ರೀತಂ ಗೌಡ ಆಪ್ತರ ನಿವಾಸದಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಪತ್ತೆ!?

ಹಾಸನ: ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ(SIT)ಕ್ಕೆ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ಡ್ರೈವ್ ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವವರ ಮನೆಗಳ ಮೇಲೆ ಎಸ್ ಐಟಿ ದಾಳಿ ನಡೆಸಿತ್ತು. ಸದ್ಯ ವಶಪಡಿಸಿಕೊಂಡಿರುವ ಪೆನ್ ಡ್ರೈವ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಅಧಿಕಾರಿಗಳು ಕಳುಹಿಸಿಕೊಡಲಿದ್ದಾರೆ ಎನ್ನಲಾಗಿದೆ.
ಇನ್ನೂ ಪ್ರೀತಂಗೌಡ ಆಪ್ತರ ಮನೆಯಲ್ಲಿ ದೊರೆತ ಪೆನ್ಡ್ರೈವ್ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎನ್ನುವುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಬಳಿಕ ತಿಳಿದು ಬರಬೇಕಿದೆ.
ಹಾಸನದ 18 ಕಡೆಗಳಲ್ಲಿ ನಡೆಸಲಾದ ದಾಳಿಯಲ್ಲಿ 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ವಶಕ್ಕೆ ಪಡೆದಿದ್ದು, ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068