ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

26/06/2024
ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.
ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97