ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ: ತೀವ್ರ ಕುತೂಹಲ ಮೂಡಿಸಿದ ಪ್ರಜ್ವಲ್ ಕೇಸ್ - Mahanayaka

ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ: ತೀವ್ರ ಕುತೂಹಲ ಮೂಡಿಸಿದ ಪ್ರಜ್ವಲ್ ಕೇಸ್

prajwal revanna
29/05/2024


Provided by

ಬೆಂಗಳೂರು:  ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ 31 ದಿನಗಳಿಂದ ನಾಪತ್ತೆಯಾಗಿರುವ  ಸಂಸದ ಪ್ರಜ್ವಲ್ ಅವರು ವಿದೇಶದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ.   ಮೊನ್ನೆ ಅಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಎಸ್‌ ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಇಂದು ಪ್ರಜ್ವಲ್ ಪರವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಅರ್ಜಿಯನ್ನು ಇಂದೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ವಕೀಲರು ಮಾಡಿದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿಲ್ಲ,  ಮೇ 31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.

ಪ್ರಜ್ವಲ್ ಅವರ ಜಾಮೀನು ಅರ್ಜಿ ವಿಚಾರಣೆ ಮೇ 31ಕ್ಕೆ ನಿಗದಿಯಾಗಿದೆ. ಪ್ರಜ್ವಲ್ ವಿದೇಶದಿಂದ ಹಿಂದಿರುಗಲು ವಿಮಾನದ ಟಿಕೆಟ್ ಬುಕ್ ಆಗಿದೆ ಅವರನ್ನು ಬಂಧಿಸಲು ಎಸ್‌ ಐಟಿ ಎಲ್ಲಾ ತಯಾರಿ ನಡೆಸಿದೆ.

ತಮ್ಮ ಮೇಲಿನ ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ