ಅತ್ಯಾಚಾರಿ ಪ್ರಜ್ವಲ್ ರನ್ನು ಪ್ರಧಾನಿ ರಕ್ಷಿಸುತ್ತಿದ್ದಾರೆ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಲೈಂಗಿಕ ಹಗರಣದ ಆರೋಪಿ ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇದು ಮೋದಿಯ ಗ್ಯಾರಂಟಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಹಕವಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಸಾಕಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದು ಕೇವಲ ಸೆಕ್ಸ್ ಹಗರಣವಲ್ಲ. ಸಾಮೂಹಿಕ ಅತ್ಯಾಚಾರ. ಇದನ್ನು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿ ನಾಯಕರಿಗೆ ಗೊತ್ತಿದ್ದರೂ ಟಿಕೆಟ್ ನೀಡಲು ಯಾಕೆ ಒಪ್ಪಿದರು ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ,
ಕರ್ನಾಟಕದ ಮಹಿಳೆಯರು ಇದನ್ನು ಅರ್ಥಮಾಡಿಕೊಳ್ಳಬೇಕು. ಜಗತ್ತಿನಲ್ಲೇ ಇಂತಹ ಘಟನೆ ನಡೆದಿಲ್ಲ. ಇಡೀ ಜಗತ್ತಿನಲ್ಲೇ ಈ ವಿಚಾರ ಚರ್ಚೆಯಾಗುತ್ತಿದೆ. ಅಧಿಕಾರಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ. ದೇಶದ ಪ್ರಧಾನಿಗಳು ಅತ್ಯಾಚಾರಿಗಳ ಪರ ಮತಯಾಚಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ದೇಶದ ಮಹಿಳೆಯರಲ್ಲಿ ಕ್ಷಮೆ ಯಾಚಿಸಬೇಕು ಎಂದವರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth