9:51 AM Wednesday 10 - September 2025

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಆರೋಪ: ಇಬ್ಬರು ಆರೋಪಿಗಳು  ಅರೆಸ್ಟ್

prajwal revanna
28/05/2024

ಬೆಂಗಳೂರು:  ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋಗಳನ್ನು ಹರಿಯಬಿಟ್ಟಿರುವ ಆರೋಪದಲ್ಲಿ  ಎಸ್ ಐಟಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಇಂದು ಹೈಕೋರ್ಟ್​​ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್​ ನನ್ನು ಎಸ್​ಐಟಿ ಬಂಧಿಸಿದೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ವಿಡಿಯೋ ವೈರಲ್ ಮಾಡಿದವರನ್ನು ಬಂಧಿಸಿಲ್ಲ ಎಂದು  ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಹೊರ ಹಾಕಿದ್ದರು. ಇದೀಗ ದೂರು ದಾಖಲಾಗಿ  ಒಂದು ತಿಂಗಳ ನಂತರ ಆರೋಪಿಗಳ ಬಂಧನವಾಗಿದೆ.

ಬಂಧಿತ ಆರೋಪಿಗಳ ಪೈಕಿ ನವೀನ್ ಗೌಡ ಎಂವಾತ ಪ್ರಜ್ವಲ್ ರೇವಣ್ಣ ವಿಡಿಯೋ  ಬಿಡುಗಡೆಗೆ ಕ್ಷಣಗಣನೆ ಎಂದು ಪೋಸ್ಟ್ ಹಾಕಿಕೊಂಡಿದ್ದ. ಈ ಪೋಸ್ಟ್ ಸ್ಕ್ರೀನ್ ಶಾಟ್ ತೆಗೆದು ಜೆಡಿಎಸ್ ಪೊಲೀಸರಿಗೆ ದೂರು ನೀಡಿತ್ತು.

ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದ. ಈ ಸಂಬಂಧ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದರೆ ನವೀನ್ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version