ಪ್ರಜ್ವಲ್ ರೇವಣ್ಣ ವೈರಲ್ ವಿಡಿಯೋ ಅಸಲಿಯೋ, ನಕಲಿಯೋ?: ಪೊಲೀಸರ ಕೈ ಸೇರಿದ FSL ರಿಪೋರ್ಟ್
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೆನ್ ಡ್ರೈವ್ ನಲ್ಲಿರುವ ವಿಡಿಯೋದ FSL ರಿಪೋರ್ಟ್ ಪೊಲೀಸರ ಕೈ ಸೇರಿದೆ.
FSL Reportನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋಗಳು ಅಸಲಿ ವಿಡಿಯೋಗಳು ಎಂದು ದೃಢಪಡಿಸಲಾಗಿದೆ. ಈ ವಿಡಿಯೋಗಳನ್ನು ಎಡಿಟಿಂಗ್ ಅಥವಾ ಮಾರ್ಫಿಂಗ್ ಮಾಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಎಲ್ಲ ವಿಡಿಯೋಗಳನ್ನು ಎಸ್ ಐಟಿ ಅಧಿಕಾರಿಗಳು FSLಗೆ ಕಳುಹಿಸಿತ್ತು.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ವಿಡಿಯೋ ಅಸಲಿಯಾದರೂ, ವಿಡಿಯೋದಲ್ಲಿರುವ ವ್ಯಕ್ತಿಯ ಮುಖ ಕಾಣುತ್ತಿಲ್ಲ. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂಧನಕ್ಕೊಳಗಾಗಿರುವ ವ್ಯಕ್ತಿಗೂ ಹೋಲಿಕೆ ಮಾಡಿ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ಎಫ್ ಎಸ್ ಎಲ್ ರಿಪೋರ್ಟ್ ಬಂದ ಬೆನ್ನಲ್ಲೇ ತನಿಖೆ ಯಾವ ರೀತಿಯಲ್ಲಿ ಮುಂದುವರಿಯಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























