ಮತ್ತೆ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ: ಎಸ್ ಐಟಿಯ ಮುಂದಿನ ನಡೆ ಏನು?

prajwal revanna
15/05/2024

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಬಂಧನಕ್ಕಾಗಿ ಎಸ್ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಪ್ರಜ್ವಲ್ ಬೆಂಗಳೂರಿಗೆ ಇಂದು ಬಂದಿಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ  ಟಿಕೆಟ್ ಕ್ಯಾನ್ಸಲ್ ಮಾಡಿಕೊಳ್ಳಲಾಗಿದೆ.

ಚುನಾವಣೆ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದು ಅವರ ಬಂಧನಕ್ಕಾಗಿ ಎಸ್‌ ಐಟಿ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿತ್ತು. ಜರ್ಮನಿಗೆ ತೆರಳುವಾಗಲೇ ಪ್ರಜ್ವಲ್ ರೇವಣ್ಣ ಅವರು ರಿಟರ್ನ್ ಟಿಕೆಟ್ ಕೂಡ ಬುಕ್ ಮಾಡಿದ್ದು, ಯಾವಾಗ ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಯಿತೋ ಆಗ ಟಿಕೆಟ್ ಕ್ಯಾನ್ಸಲ್ ಮಾಡಿದ್ದರು.

ಆದರೆ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದು, ಆಗಲಾದರೂ ಭಾರತಕ್ಕೆ ಬರಬಹುದು ಎಂಬ ನಿರೀಕ್ಷೆ ಇತ್ತು, ಆದರೆ ಆಗ ಕೂಡ ಪ್ರಜ್ವಲ್ ರೇವಣ್ಣ ಟಿಕೆಟ್ ಕ್ಯಾನ್ಸಲ್ ಮಾಡಿದ್ದರು.

ಇದರ ಮಧ್ಯೆ ಕಿಡ್ನ್ಯಾಪ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್ ಡಿ ರೇವಣ್ಣ ಬಂಧನವಾಗಿದ್ದು, ಮಂಗಳವಾರದಂದು ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆಳವಣಿಗೆ ನಡೆದ ನಂತರ ಪ್ರಜ್ವಲ್ ರೇವಣ್ಣ ಮ್ಯೂನಿಚ್ ನಿಂದ ಇಂದು ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ್ದು, ಆದರೆ ಕೊನೆ ಕ್ಷಣದಲ್ಲಿ ಮತ್ತೆ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ.

ಭಾರತಕ್ಕೆ ಬಂದಿಳಿದ ತಕ್ಷಣವೇ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲು ಎಸ್ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡುವ ಮೂಲಕ ಮತ್ತೊಮ್ಮೆ ಅಧಿಕಾರಿಗಳ ತಾಳ್ಮೆ ಪರೀಕ್ಷೆ ಮಾಡಿದ್ದಾರೆ. ಎಸ್ ಐಟಿ ಮುಂದೇನು ಕ್ರಮಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version