9:47 AM Wednesday 10 - September 2025

ದಿಢೀರ್ ವಿಡಿಯೋ ಬಿಡುಗಡೆ ಮಾಡಿದ ಪ್ರಜ್ವಲ್ ರೇವಣ್ಣ: ಹೇಳಿದಿಷ್ಟು..!

prajwal revanna
27/05/2024

ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿರುವ ಪ್ರಜ್ವಲ್ ರೇವಣ್ಣ ಇಂದು ದಿಢೀರ್ ವಿಡಿಯೋ ಬಿಡುಗಡೆಯ ಮೂಲಕ ತಾನು ಮೇ 31ರಂದು ಬೆಳಗ್ಗೆ 10:30ಕ್ಕೆ ಎಸ್ ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದಾರೆ.

ಈ ವಿಡಿಯೋದಲ್ಲಿ ತಂದೆ ತಾಯಿ  ಹಾಗೂ ತಾತನ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆಯಾಚಿಸಿದ್ದಾರೆ.

ಇನ್ನೂ ತನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ಅವರು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.  ಅಲ್ಲದೇ, ವಿದೇಶಕ್ಕೆ ಹೋದ ಮೂರು ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿರೋದಾಗಿ ಅವರು ಹೇಳಿದ್ದಾರೆ.

ಇನ್ನೂ ತಮ್ಮ ವಿರುದ್ಧದ ಎಲ್ಲ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ, ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಷಡ್ಯಂತ್ರ ರೂಪಿಸಲಾಗಿದೆ ಎಂದೂ ಅವರು ಉಲ್ಲೇಖಿಸಿದರು.

ಕಾನೂನಿನ ಮೇಲೆ ಅಪಾರ ಗೌರವವಿದೆ ನನ್ನ ಮೇಲಿನ ಆರೋಪ ಕೇಳಿ ನನಗೆ ಶಾಕ್ ಆಯಿತು. ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದರೆ, ಮೇ 31ರಂದು ಅವರು ಭಾರತಕ್ಕೆ  ಆಗಮಿಸುತ್ತಿದ್ದಂತೆಯೇ ಅವರನ್ನು ಎಸ್ ಐಟಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version