ಮೋದಿಗೆ ವೋಟ್ ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಪ್ರಮೋದ್  ಮುತಾಲಿಕ್ - Mahanayaka

ಮೋದಿಗೆ ವೋಟ್ ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಪ್ರಮೋದ್  ಮುತಾಲಿಕ್

muthalik
02/03/2023

ಕಾರವಾರ: ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಕರೆ ನೀಡಿದ್ದು, ಬಿಜೆಪಿ ಹಾಗೂ ಸಂಘ ಪರಿವಾರದ ನಡುವಿನ ತಿಕ್ಕಾಟ ಚುನಾವಣೆಯ ಸಂದರ್ಭದಲ್ಲಿ ತಾರಕಕ್ಕೇರಿದೆ.

ಶಿರಸಿಯ ಸೈಹಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟಗೆತ್ತಿಕೊಂಡರು.

ಇಲ್ಲಿ ಆರೇಳು ಬಾರಿ ಗೆದ್ದವರು ಇಲ್ಲಿದ್ದಾರೆ. ಕರ್ನಾಟಕವನ್ನು ಲೂಟಿ ಮಾಡಿದವರು ಇದ್ದಾರೆ. ಮೊದಲು ಇದ್ದಾಗ ಇವರ ಆಸ್ತಿ ಎಷ್ಟಿತ್ತು, ಈಗ ಎಷ್ಟಿದೆ ಎಂಬುದನ್ನು ಅಳೆಯಲೂ ಆಗದಷ್ಟು ಗಳಿಸಿ ಇಟ್ಟಿದ್ದಾರೆ,  ಯಾರಿಗಾಗಿ ಗಳಿಸಿದ್ದೀರಿ? ಯಾರಿಗಾಗಿ ಬಂದಿದ್ದು ಎಂಬುದು ನೆನಪಿದೆಯಾ? ಜನಸಂಘ ಹುಟ್ಟಿದ್ದು ಯಾಕೆ ಎನ್ನುವುದು ನೆನಪಿದೆಯಾ? ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಮೋದಿ ಹೇಳಿದ್ದು ನೆನಪಿದೆಯಾ? ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಸಾವಿರಾರು ವರ್ಷಗಳಿಂದಲೂ ಗೋಮಾತೆಯನ್ನು ಉಳಿಸಿ ಎಂದು ಋಷಿಮುನಿಗಳು ಹೇಳುತ್ತಿದ್ದಾರೆ. ಗ್ರಾಮದಿಂದ ಕೇಂದ್ರದವರೆಗೂ ನಮ್ಮದೇ ಸರ್ಕಾರವಿದ್ದರೂ ಒಂದು ಆಕಳು ಉಳಿಸಲು ಆಗುತ್ತಿಲ್ಲ. ಕಾನೂನಿದೆ, ಪೊಲೀಸರಿದ್ದಾರೆ, ಅಧಿಕಾರವಿದೆ. ಆದರೆ ಇಚ್ಛಾಶಕ್ತಿ ಎನ್ನುವುದಿಲ್ಲ. ಆರೇಳು ಬಾರಿ ಸಂಸದರು, ಶಾಸಕರಾದವರು ಇದ್ದಾರೆ. ಆದರೆ ಅವರಿಗೆ ಆಕಳ ರೋಧನೆ ಕೇಳಿಸುತ್ತಿಲ್ಲ, ಅದರ ನೆತ್ತರ ಕಾಣುತ್ತಿಲ್ಲವೇ? ಅದರ ಶಾಪ ತಟ್ಟುತ್ತೆ  ಎಂದು ಅವರು ಎಚ್ಚರಿಸಿದರು.

ಗೋವಾಕ್ಕೆ ಗೋಮಾಂಸ ರಫ್ತಾಗುತ್ತಿರುವುದು ಗೊತ್ತಾಗುತ್ತಿಲ್ಲವೇ? ಹಿಂದೂ ಸಂಘಟನೆಗಳೇ ಹಿಡಿದು ನಾವೇ ಕೇಸು ಹಾಕಿಕೊಂಡು ಜೈಲಿಗೆ ಹೋಗಬೇಕಾ? ಹಾಗಾದರೆ ನೀವ್ಯಾಕಿರೋದು? ಸಗಣಿ ತಿನ್ನೋದಕ್ಕಾ? ಗೋಮಾತೆಯನ್ನ ರಕ್ಷಣೆ ಮಾಡಲು, ಅದರ ನೆತ್ತರ ಹರಿಯುವುದನ್ನು ತಡೆಯಲು ಆಗದಿದ್ದರೆ ದಯವಿಟ್ಟು ಬೇರೆಯವರಿಗೆ ಅವಕಾಶ ನೀಡಿ ಎಂದು ಬಿಜೆಪಿ ನಾಯಕರನ್ನು ಅವರು ತರಾಟೆಗೆತ್ತಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ