ಪ್ರಮೋದ್ ಮುತಾಲಿಕ್ ಸ್ಪರ್ಧಿಸುವ ಕ್ಷೇತ್ರ ಅಧಿಕೃತವಾಗಿ ಘೋಷಣೆ: ಪಕ್ಷೇತರರಾಗಿ ಸ್ಪರ್ಧಿಸಲಿರುವ ಶ್ರೀರಾಮ ಸೇನಾ ಮುಖ್ಯಸ್ಥ - Mahanayaka

ಪ್ರಮೋದ್ ಮುತಾಲಿಕ್ ಸ್ಪರ್ಧಿಸುವ ಕ್ಷೇತ್ರ ಅಧಿಕೃತವಾಗಿ ಘೋಷಣೆ: ಪಕ್ಷೇತರರಾಗಿ ಸ್ಪರ್ಧಿಸಲಿರುವ ಶ್ರೀರಾಮ ಸೇನಾ ಮುಖ್ಯಸ್ಥ

pramod muthalik
23/01/2023

ಉಡುಪಿ: ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಕಾರ್ಕಳದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡುತ್ತಿದ್ದೇನೆ. ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂಗಳಿಗೆ ನೋವಾಗಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವ ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ನಾನು ಬಿಜೆಪಿ – -ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳು ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟ. ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ. ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿ ಯಲ್ಲಿ ಶ್ರೀರಾಮಸೇನೆ ಮುಖಂಡರಾದ ಗಂಗಾಧರ ಕುಲಕರ್ಣಿ, ಹರೀಶ್ ಅಧಿಕಾರಿ, ಸುಧೀರ್ ಹೆಬ್ರಿ, ಸುಂದರ, ಜಯರಾಮ್ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ