ಪ್ರಾಂಶುಪಾಲರಿಗೆ ಗುಂಡಿಕ್ಕಿ ಹತ್ಯೆಗೆ ಯತ್ನಿಸಿದ 15ರ ಬಾಲಕ! - Mahanayaka
7:43 AM Thursday 18 - September 2025

ಪ್ರಾಂಶುಪಾಲರಿಗೆ ಗುಂಡಿಕ್ಕಿ ಹತ್ಯೆಗೆ ಯತ್ನಿಸಿದ 15ರ ಬಾಲಕ!

shootout
06/12/2021

ಜೈಪುರ: ಶಾಲೆಯಿಂದ ಹೊರಗೆ ಹಾಕಿದರು ಎಂಬ ಆಕ್ರೋಶದಿಂದ 15 ವರ್ಷ ವಯಸ್ಸಿನ ಬಾಲಕನೋರ್ವ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹತ್ಯೆ ನಡೆಸಲು ಯತ್ನಿಸಿದ ಆತಂಕಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.


Provided by

10ನೇ ತರಗತಿಯಲ್ಲಿ ಕಲಿಯುತ್ತಿದ್ದ ಈ ವಿದ್ಯಾರ್ಥಿಯ ನಡವಳಿಕೆ ಸರಿಯಿಲ್ಲದ ಕಾರಣ ಆತನನ್ನು ಶಾಲೆಯಿಂದ ಹೊರಹಾಕಲಾಗಿತ್ತು ಎನ್ನಲಾಗಿದೆ. ಶಾಲೆಯಿಂದ ಹೊರಹಾಕಲಾಗಿದ್ದರೂ ಆತ ಅನಗತ್ಯ ನೆಪಗಳನ್ನು ಹೇಳಿಕೊಂಡು ಆಗಾಗ ಶಾಲೆಯ ಬಳಿಯಲ್ಲಿ ಸುಳಿದಾಡುತ್ತಿದ್ದ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಪ್ರಾಂಶುಪಾಲರ ಕಚೇರಿಯ ಬಳಿ ಸುತ್ತಾಡುತ್ತಾ ಹೊಂಚು ಹಾಕುತ್ತಿದ್ದ ಬಾಲಕ  ರಿವಾಲ್ವರ್  ಹಿಡಿದುಕೊಂಡು ಏಕಾಏಕಿ ಪ್ರಾಂಶುಪಾಲ ಭಗವಾನ್ ತ್ಯಾಗಿ ಅವರ ಕಚೇರಿಗೆ ನುಗ್ಗಿ ಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಸದ್ಯ ಬಾಲ ನ್ಯಾಯ ಕಾಯ್ದೆಯಡಿಯಲ್ಲಿ ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಮೋದ್ರೇಕಕಾರಿ ಮದ್ದು ನೀಡಿ ಯುವಕನಿಂದ ಅತ್ಯಾಚಾರ: ಬಾಲಕಿ ಸಾವು

ಬಾಬಾಸಾಹೇಬ್ ಅಂಬೇಡ್ಕರ್ ರ ಕೊನೆಯ ಸಂದೇಶ

ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ನಮನ

ಮಕ್ಕಳನ್ನು ಮನೆಯಲ್ಲಿಯೇ ಬಂಧಿಸಿದ ತಾಯಿ: ಮಕ್ಕಳ ಅಳು ಕೇಳಲಾರದೇ ಸ್ಥಳೀಯರಿಂದ ದೂರು

ಶಾಲಾ, ಕಾಲೇಜುಗಳಲ್ಲಿ ಕೊವಿಡ್ ಹೆಚ್ಚಳ: ಶಾಲಾ ಕಾಲೇಜುಗಳು ಮತ್ತೆ ಬಂದ್ ಆಗುತ್ತಾ?

ಪುನೀತ್ ರಾಜ್ ಕುಮಾರ್ ನಟನೆಯ ‘ಗಂಧದ ಗುಡಿ’ ಟೀಸರ್ ಬಿಡುಗಡೆ: ವಿಡಿಯೋ ನೋಡಿ

ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ | ಹೆಚ್.ಡಿ.ಕುಮಾರಸ್ವಾಮಿ

ಇತ್ತೀಚಿನ ಸುದ್ದಿ