ಬಿಜೆಪಿ ತೊರೆದು 24 ಗಂಟೆಗಳಲ್ಲೇ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರೆಂಟ್!

swamy prasad mourya
12/01/2022

ಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಸುಲ್ತಾನ್ ಪುರ ನ್ಯಾಯಾಲಯವು ಅರೆಸ್ಟ್ ವಾರೆಂಟ್ ಹೊರಡಿಸಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.

2014ರಲ್ಲಿ ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮೌರ್ಯ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದ್ದು, ಹಿಂದೂ ದೇವರುಗಳ ವಿರುದ್ಧ ಮಾತನಾಡಿದ್ದಾರೆ ಎನ್ನುವ ಆರೋಪ ಮೌರ್ಯ ವಿರುದ್ಧ ಇದೆ.

ಬಿಜೆಪಿಯ ದುರಾಡಳಿತದಿಂದ ಬೇಸತ್ತು ಮೌರ್ಯ ಅವರು ಎಸ್  ಪಿಗೆ ಸೇರಿರುವುದಾಗಿ ಹೇಳಿಕೊಂಡಿದ್ದರು. ಮೌರ್ಯ ಜೊತೆಗೆ  ಶಾಸಕರಾದ ರೋಶನ್ ಲಾಲ್ ವರ್ಮಾ, ಭಗವತಿ ಸಾಗರ್ ಮತ್ತು ಬ್ರಿಜೇಶ್ ಪ್ರಜಾಪತಿ ಅವರು ಕೂಡ ಬಿಜೆಪಿ ಬಿಟ್ಟು ಎಸ್ ಪಿಗೆ ಸೇರ್ಪಡೆಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

“ಲೋನ್ ಆ್ಯಪ್ ನಿಂದ ಸಾಲ ಪಡೆದು ಮಾನ, ಪ್ರಾಣ ಕಳೆದುಕೊಳ್ಳಬೇಡಿ”

ಪಾದಯಾತ್ರೆಯ ವೇಳೆ ಚರ್ಚೆಗೀಡಾದ ಡಿ.ಕೆ.ಸುರೇಶ್ ವರ್ತನೆ

1ರಿಂದ 9ನೇ ತರಗತಿ ಮಕ್ಕಳಿಗೆ ನಾಳೆಯಿಂದ ಚಂದನ ಟಿವಿಯಲ್ಲಿ ಪಾಠ!

77ರ ವೃದ್ಧ ಸೇರಿದಂತೆ 8 ಮಂದಿಯಿಂದ ಬಾಲಕಿಯ ಮೇಲೆ ಅತ್ಯಾಚಾರ

ಇತ್ತೀಚಿನ ಸುದ್ದಿ

Exit mobile version