ನನ್ನಪ್ಪ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನೂ ಸುಂದರವಾಗಿ ಹುಟ್ಟುತ್ತಿದ್ದೆ: ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

prathap simha
24/10/2025

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ನಡುವಿನ ವಾಕ್ ಸಮರ ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದು, ಇದೀಗ ಅಸಭ್ಯ, ಅಸಹ್ಯ ಪ್ರತಿಕ್ರಿಯೆಗಳಾಗಿ ಬದಲಾಗಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತಮ್ಮ ತಾಯಿ ಬಗ್ಗೆ  ಪ್ರದೀಪ್ ಈಶ್ವರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಾಗ್ದಾಳಿ ನಡೆಸಿದ್ದು,  ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಎಂದಿದ್ದಾರೆ.

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್. ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು ಮಗನೆ ಎಂದು ಪ್ರತಾಪ್ ಸಿಂಹ ಏಕವಚನದಲ್ಲೇ ಕಿಡಿ ಕಾರಿದರು.

ಪ್ರದೀಪ್ ಈಶ್ವರ್ ​ಗೆ ಅವನ ಭಾಷೆಯಲ್ಲಿಯೇ ಉತ್ತರ ಹೇಳುತ್ತಿರುವುದಕ್ಕೆ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version