ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ: ಜಗ್ಗೇಶ್ - Mahanayaka
10:51 AM Wednesday 22 - October 2025

ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ: ಜಗ್ಗೇಶ್

jaggesh
23/08/2022

ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ, ಗಲಾಟೆಗೆ ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯ ಸಭೆ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ. ಪ್ರತಿಭಟನೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ್ಡ ಗಲಾಟೆಯಾಗಲು ಯಾಕೆ ಅವಕಾಶ ನೀಡಬೇಕು. ಎಷ್ಟು ಕೊಲೆ ನಡೆದಿದೆ ಗೊತ್ತೇ ಇದೆ. ಕೇರಳ ಗಡಿ ದಾಟಿ ಬಂದು ಕೊಲೆ ಮಾಡುತ್ತಾರೆ  ಹೀಗಾಗಿ ಈ ಇಂತಹ ಘಟನೆಗಳು ಸಂಭವಿಸಿದಂತೆ ತಡೆಯಬೇಕು ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿದ್ದಾನೆ. ಆತನ ಯಾವುದೋ ವಿಚಾರಕ್ಕೆ ಬೇಸರಗೊಂಡು ಎಸೆದಿದ್ದಾನೆ. ಇದು ಜಗಜ್ಜಾಹೀರಾಗಿದೆ ಎಂದು ಇದೇ ವೇಳೆ ಅವರು ಹೇಳಿದರು.

ಕಾಂಗ್ರೆಸ್ ಹೋರಾಟ ಮುಂದಿನ ಜೂನ್ವರೆಗೂ ಇರಬಹುದು. ಆ ಮೇಲೆ ಎಲ್ಲಾ ಮುಗಿಯುತ್ತದೆ. ರಾಜ್ಯದ ಜನತೆಗೆ ಗೊತ್ತಿದೆ ಯಾಕೆ ಈಗ ಪ್ರತಿಭಟನೆಗಳು ಆಗುತ್ತಿದೆ ಎಂದು ಎಂದು ಟಾಂಗ್ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ