ಪ್ರತೀ ದಿನ  1,471 ಟನ್ ಆಕ್ಸಿಜನ್ ಪೂರೈಸಿ | ಕೇಂದ್ರ ಸರ್ಕಾರಕ್ಕೆ ಯಡಿಯೂರಪ್ಪ ಮನವಿ - Mahanayaka
10:52 PM Thursday 12 - December 2024

ಪ್ರತೀ ದಿನ  1,471 ಟನ್ ಆಕ್ಸಿಜನ್ ಪೂರೈಸಿ | ಕೇಂದ್ರ ಸರ್ಕಾರಕ್ಕೆ ಯಡಿಯೂರಪ್ಪ ಮನವಿ

yediyurappa
24/04/2021

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಪ್ರತೀ ದಿನ  1,471 ಟನ್ ಆಕ್ಸಿಜನ್ ಪೂರೈಸುವಂತೆ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮುಂದಿನ 10 ದಿನಗಳಿಗೆ ಎರಡು ಲಕ್ಷ ಡೋಸ್‌ಗಳಷ್ಟು ರೆಮ್‌ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ನೀಡಬೇಕೆಂದು ಕೇಳಿಕೊಂಡಿದ್ದಾರೆ. ಗುರುವಾರ ಒಂದೇ ದಿನ ರಾಜ್ಯದಲ್ಲಿ 500 ಟನ್ ಆಮ್ಲಜನಕ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳು ಮುಚ್ಚುವ ಪರಿಸ್ಥಿತಿ ಎದುರಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಆಮ್ಲಜನಕ ಬಳಕೆ ಪ್ರತಿದಿನ ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯಕ್ಕೆ ಏ.25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ. ಏ.30ರ ನಂತರ 1471 ಟನ್ ಆಮ್ಲಜನಕ ಅಗತ್ಯವಿದೆ. ಹೀಗಾಗಿ ಆಮ್ಲಜನಕದ ಕೊರತೆ ನೀಗಿಸಿ, ತಕ್ಷಣ 1471 ಟನ್ ಆಮ್ಲಜನಕ ಹಂಚಿಕೆ ಮಾಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಶೇ.16ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಯಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.

ಇತ್ತೀಚಿನ ಸುದ್ದಿ