5:08 PM Wednesday 20 - August 2025

ಪ್ರತಿಮಾ ಕೊಲೆ ಪ್ರಕರಣ: ತಲೆಮರೆಸಿಕೊಳ್ಳಲು ಹೋಗುತ್ತಿದ್ದ ಮಾಜಿ ಕಾರು ಚಾಲಕ ಅರೆಸ್ಟ್

pratima
06/11/2023

ಚಾಮರಾಜನಗರ: ಗಣಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಿರಣ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ಪ್ರತಿಮಾ ಕೊಲೆ ಬಳಿಕ ತಲೆ ಮರೆಸಿಕೊಳ್ಳಲು ಚಾಮರಾಜನಗರದ ಕಡೆ ಹೊರಟಿದ್ದ ಕಿರಣ್ ನನ್ನು ಖಚಿತ ಮಾಹಿತಿಯ ಮೆರೆಗೆ ಸ್ಥಳಕ್ಕೆ ಆಗಮಿಸಿದ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ. ಆದ್ರೆ ಪ್ರತಿಮಾ ಅವರು ಕಿರಣ್ ನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಕೆಲಸದಿಂದ ವಜಾ ಮಾಡಿದ ಹಿನ್ನೆಲೆ ಕೊಲೆ ಮಾಡಿರುವ ಶಂಕೆಯ ಮೇರೆಗೆ ಆತನನ್ನು ವಶಕ್ಕೆ ಪಡೆಯಲಾಗಿದೆ.

ಕಿರಣ್ ನನ್ನು  ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.  ಕಿರಣ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಸುಬ್ರಹ್ಮಣ್ಯಪುರ ಪೊಲೀಸರು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version