ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿದ ಮುಖ್ಯ ಶಿಕ್ಷಕ ಅಮಾನತು! - Mahanayaka
12:50 PM Tuesday 4 - November 2025

ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿದ ಮುಖ್ಯ ಶಿಕ್ಷಕ ಅಮಾನತು!

abdul munaf
29/09/2022

ಗದಗ: ಸರ್ಕಾರದ ಆದೇಶ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿದ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಮುಖ್ಯ  ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ಶಾಲೆಯ 43 ವಿದ್ಯಾರ್ಥಿಗಳಿಗೆ  ‘ಮಹಮ್ಮದ್(ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ(ಸ) ಎಂಬ ಪುಸ್ತಕವನ್ನು ವಿತರಿಸಿ ಶಿಕ್ಷಣ ಇಲಾಖೆ ಮತ್ತು ಶಾಲೆಯ ಶಿಕ್ಷಕರಿಗೂ ಮಾಹಿತಿ ನೀಡದೇ ಅಬ್ದುಲ್ ಮುನಾಫ್ ಪ್ರಬಂಧ ಸ್ಪರ್ಧೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿಯೂ ಹೇಳಿದ್ದರು ಎನ್ನಲಾಗಿದೆ.

ಇನ್ನೂ ಯಾವುದೇ ಮಾಹಿತಿ ನೀಡದೇ ಸ್ಪರ್ಧೆ ಆಯೋಜಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್. ಬಿರಾದಾರ ಅವರು,  ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಕ್ಕಳಿಗೆ ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗುತ್ತಿರುವ ಬಗ್ಗೆ  ಶ್ರೀರಾಮ ಸೇನೆ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಇನ್ನೂ ಯಾವುದೇ ಮಾಹಿತಿ ನೀಡದೇ ಸ್ಪರ್ಧೆ ಆಯೋಜಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್. ಬಿರಾದಾರ ಶಿಕ್ಷಕ ಅಬ್ದುಲ್ ಮುನಾಫ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಕ್ಕಳಿಗೆ ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗುತ್ತಿರುವ ಬಗ್ಗೆ  ಶ್ರೀರಾಮ ಸೇನೆ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ