ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿನೀರು ಪಾಲು - Mahanayaka

ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿನೀರು ಪಾಲು

thunga bhadra
02/03/2022


Provided by

ಗದಗ: ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ತುಂಗಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಮೂಲದ ಶರಣಗೌಡ (15), ಹೊಸಪೇಟೆ ಮೂಲದ ಅಖಿಲೇಶ್ (15) ನೀರುಪಾಲಾದ ವಿದ್ಯಾರ್ಥಿಗಳು. ಈ ಘಟನೆ ಮುಂಡರಗಿ ತಾಲೂಕಿನ ಸಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನ ಬಳಿಯ ನದಿಯಲ್ಲಿ ನಡೆದಿದೆ.

ಓರ್ವ ವಿದ್ಯಾರ್ಥಿ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾನೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯ ಖಾಸಗಿ ಶಾಲೆಯ ಸುಮಾರು 40 ವಿದ್ಯಾರ್ಥಿಗಳನ್ನು ಶಿಕ್ಷಕರು ದೇವಸ್ಥಾನಕ್ಕೆಂದು ಪ್ರವಾಸಕ್ಕೆ ಕರೆದುಕೊಂಡು ಬಂದಿದ್ದರು.

ಬೆಳಗ್ಗೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನೀರಿನ ಆಳ ತಿಳಿಯದೆ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ. ಇದರಲ್ಲಿ ಒಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಇನ್ನೋರ್ವ ವಿದ್ಯಾರ್ಥಿ ಶವಕ್ಕಾಗಿ ಶೋದಕರ್ಯ ಮುಂದುವರಿಸಲಾಗಿದೆ. ಘಟನ ಸ್ಥಳಕ್ಕೆ ಮುಂಡರಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೇಂದ್ರ ಸಚಿವ ಭಗವಂತ ಖೂಬಾ ವಾಹನದ ಮೇಲೆ ಕಲ್ಲು ತೂರಾಟ

ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ

ಸಿಗರೇಟ್‍ ನಿಂದ ಸುಟ್ಟು ಗರ್ಭಿಣಿಗೆ ಕಿರುಕುಳ: ಪತಿ ಬಂಧನ

ಜಾರ್ಖಂಡ್ ದೋಣಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಇತ್ತೀಚಿನ ಸುದ್ದಿ