ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ದ

ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ದವಾಗಿದೆ.
ನಾಳೆ ಅಂದರೆ ಎಪ್ರಿಲ್ 27 ರಂದು ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯಲಿದೆ. ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ.
ಇದೇ ವೇಳೆ ಬೆಳಗ್ಗೆ 11 ಗಂಟೆಯಿಂದ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಅದೇ ದಿನ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಲಿದೆ.
ಪ್ರವೀಣ್ ನೆಟ್ಟಾರು ಅವರ ಮನೆಯ ಸದಸ್ಯರ ನಕ್ಷೆಯಂತೆ ಮನೆ ನಿರ್ಮಾಣ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕುಟಂಬ ವಾಸವಾಗಿದ್ದ ಜಾಗದಲ್ಲೇ ನೂತನ ಮನೆ ನಿರ್ಮಿಸಲಾಗಿದೆ. 2,700 ಚದರ ಅಡಿ ಇರುವ ಈ ಮನೆಗೆ ಅಂದಾಜು 60 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ.
ಈ ಮನೆಯ ಸಂಪೂರ್ಣ ವೆಚ್ಚವನ್ನು ಬಿಜೆಪಿಯಿಂದ ಭರಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw