ಸಿಬಿಐನ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಿಬಿಐನ ನಿರ್ದೇಶಕರಾಗಿ ನೇಮಕಗೊಂಡಿದ್ದು, ಕೇಂದ್ರ ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ
ಈ ಮಾಸಾಂತ್ಯಕ್ಕೆ ಸಿಬಿಐನ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಅಂತ್ಯಗೊಳ್ಳಲಿದೆ.ಹೀಗಾಗಿ ಆಯ್ಕೆ ಪ್ರಕ್ರಿಯೆಗಾಗಿ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ ಹೆಸರುಗಳನ್ನು ಪಟ್ಟಿ ಮಾಡಲಾಗಲಿದೆ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್, ಮಧ್ಯಪ್ರದೇಶ ಡಿಜಿಪಿ ಸುಧೀರ್ ಸಕ್ಸೆನಾ, ತಾಜ್ ಹಾಸನ್ ಹೆಸರು ಸಿಬಿಐ ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿತ್ತು.
ಪ್ರವೀಣ್ ಸೂದ್ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು ಸಿಬಿಐ ನಿರ್ದೇಶಕರ ಹುದ್ದೆಯ ಆಯ್ಕೆ ಪಟ್ಟಿಯಲ್ಲಿ ಇವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ಪ್ರವೀಣ್ ಸೂದ್ ಭಾರೀ ಚರ್ಚೆಗೆ ಒಳಗಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಸೂದ್ ಕಾಪಾಡುತ್ತಾರೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದರು.
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw