ಹೆರಿಗೆಗೆ ಬಂದಿದ್ದ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ ಪ್ರತಿಭಟನೆ

ಬಾಗಲಕೋಟೆ: ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಬಸವ ಪಾಲಿ ಕ್ಲಿನಿಕ್ ಹೆಸರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎಂಬವರು ಮೃತಪಟ್ಟವರಾಗಿದ್ದಾರೆ.
ಲಕ್ಷ್ಮೀ ಅಪ್ಪಾಲಾಲ ಲಮಾಣಿಯವರು ಜಾನಟ್ಟಿ ಲಮಾಣಿ ತಾಂಡಾ 1 ಗ್ರಾಮದ ಮಹಿಳೆಯಾಗಿದ್ದಾರೆ. ಹೆರಿಗೆಗೆಂದು ಬಸವ ಪಾಲಿ ಕ್ಲಿನಿಕ್ ಗೆ ದಾಖಲಾಗಿದ್ದರು. ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ಲಕ್ಷ್ಮೀ ಅಪ್ಪಾಲಾಲ ಲಮಾಣಿ ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಅವರ ಕುಟುಂಬಸ್ಥರು ಆಸ್ಪತ್ರೆಗೆ ಮುಂದೆ ಪ್ರತಿಭಟನೆ ನಡೆಸಿದರು. ಮೃತದೇಹವನ್ನು ಆಸ್ಪತ್ರೆ ಮುಂದಿಟ್ಟು ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97