ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಪಡಿಸಲು ಸಿದ್ಧತೆ

National Education Policy
03/08/2023

ಬೆಂಗಳೂರು: ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ ಗ್ಯಾರಂಟಿ ಯೋಜನೆಗಳ ಬಳಿಕ ಇದೀಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಈ ಹಿಂದೆ ಘೋಷಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಪಡಿಸಲು ಸಿದ್ಧತೆ ನಡೆಸಿದೆ.

ಎಸ್‍ಇಪಿ (SEP) ಜಾರಿ ಬಗ್ಗೆ ಈಗಾಗಲೇ ಹಲವು ಹಂತದ ಸಭೆಗಳನ್ನು ಉನ್ನತ ಶಿಕ್ಷಣ ಸಚಿವರೊಂದಿಗೆ ನಡೆಸಲಾಗಿದೆ. ಅದಕ್ಕಾಗಿ ಹಂತ ಹಂತವಾಗಿ ಎನ್‍ಇಪಿ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ವರ್ಷದಿಂದಲೇ ಎನ್‍ಇಪಿ ರದ್ದು ಮಾಡಿ ಎಸ್‍ಇಪಿ ಜಾರಿಗೆ ಸರ್ಕಾರದ ಚಿಂತನೆ ನಡೆಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‍ಇಪಿ ಅಡಿ ವಿದ್ಯಾರ್ಥಿಗಳನ್ನ ದಾಖಲಾತಿ ಮಾಡಿಕೊಳ್ಳುವುದನ್ನು ಕೈಬಿಡಲಾಗುತ್ತದೆ. ಈಗಾಗಲೇ ಅದರ ಅಡಿ ದಾಖಲಾದ ವಿದ್ಯಾರ್ಥಿಗಳ ಕೋರ್ಸ್ ಮುಕ್ತಾಯಕ್ಕೆ ಕ್ರಮವಹಿಸಲಾಗುತ್ತದೆ. ಎಸ್‍ಇಪಿ ಜಾರಿಗೆ ನೀತಿ ನಿಯಮಗಳು, ಪಠ್ಯಕ್ರಮ ಸೇರಿದಂತೆ ಶಿಕ್ಷಣ ನೀತಿ ರಚನೆಗೆ ತಜ್ಞರ ಸಮಿತಿ ರಚನೆಗೆ ತಯಾರಿ ಮಾಡಿಕೊಳ್ಳಲಾಗಿದೆ.

ಶೀಘ್ರವೇ ತಜ್ಞರ ರಚನೆ ಮಾಡಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿ ಬಹುತೇಕ ರಾಜ್ಯ ಸರ್ಕಾರದ ಅಧೀನದ ವಿವಿಗಳ ಅಭಿಪ್ರಾಯ ಪಡೆದಿದೆ. ಇನ್ನು ಸರ್ಕಾರ ಈ ಸಂಬಂಧ ಶಿಕ್ಷಣ ತಜ್ಞರ ಸಮಿತಿಯ ವರದಿ ಪಡೆದ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಕ್ರಮಕ್ಕೆ ಮಂದಾಗಲಿದೆ. ಎನ್‍ಇಪಿಯ ಕೆಲವು ಅಂಶಗಳೊಂದಿಗೆ ತಜ್ಞರ ಸಮಿತಿಯಿಂದ ಸರ್ಕಾರವೇ ವಿಶೇಷ ಶಿಕ್ಷಣ ನೀತಿ ರೂಪಿಸಲಿದೆ. ಈ ಯೋಜನೆ ಫಲಿಸಿದರೆ 2024-25ನೇ ಸಾಲಿನಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version