ಉರುಳಿಗೆ ಬಿದ್ದ ಚಿರತೆ ಸಾವು: ಕಾಫಿ ತೋಟದ ಮಾಲೀಕರ ವಿರುದ್ಧ ಎಫ್ ಐಆರ್ ಗೆ ಸಿದ್ಧತೆ - Mahanayaka

ಉರುಳಿಗೆ ಬಿದ್ದ ಚಿರತೆ ಸಾವು: ಕಾಫಿ ತೋಟದ ಮಾಲೀಕರ ವಿರುದ್ಧ ಎಫ್ ಐಆರ್ ಗೆ ಸಿದ್ಧತೆ

Leopard
21/02/2025


Provided by

ಮೂಡಿಗೆರೆ: ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಮೃತಪಟ್ಟಿದೆ.

ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು.

ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ