ಒಡಿಶಾದಲ್ಲಿ ಭೀಕರ ರೈಲು ದುರಂತ: ಮೋದಿ, ಮುರ್ಮು, ರಾಹುಲ್ ಗಾಂಧಿ ಸಂತಾಪ

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 233 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರ ಜೊತೆಗೆ ಘಟನೆ ಹಾಗೂ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಸಂತ್ರಸ್ತರಿಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕೂಡ ಘಟನೆ ಸಂಬಂಧ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಕೂಡ ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಒಡಿಶಾ ಸಿಎಂ ನವೀನ್ ಪಟ್ನಾಯಕ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಒಡಿಶಾದ ಬಾಲಸೋರ್ ಬಳಿ ನಡೆದಿರುವ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದ ಸುದ್ದಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವಂತೆ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw