12:58 PM Thursday 23 - October 2025

ದಿಲ್ಲಿ ಸೇವಾ ಮಸೂದೆಗೆ ರಾಷ್ಟ್ರಪತಿ ಸಹಿ: ರಾಷ್ಟ್ರ ರಾಜಧಾನಿ ಮೇಲೆ ಕೇಂದ್ರದ ನಿಯಂತ್ರಣ ಮತ್ತಷ್ಟು ಬಿಗಿ

12/08/2023

ದೆಹಲಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣ ಹೊಂದುವ ಸಂಬಂಧ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟಿದ್ದ ದಿಲ್ಲಿ ಸೇವಾ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಹಿ ಹಾಕಿದ್ದಾರೆ.

ಇದರೊಂದಿಗೆ, ಈ ಮಸೂದೆಯು ಕಾನೂನು ಆಗುತ್ತದೆ. ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಸೇವಾ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಮತ್ತು ಆಗಸ್ಟ್ 7 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು.

ಈ ಕಾಯಿದೆಯು ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀಡುತ್ತದೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ಕೇಂದ್ರ ಸರ್ಕಾರದ ನಿಯಂತ್ರಣ ಮತ್ತಷ್ಟು ಹೆಚ್ಚಾಗಲಿದೆ.

ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿಗೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ, ರಾಷ್ಟ್ರ ರಾಜಧಾನಿಯಲ್ಲಿನ ಸೇವೆಗಳ ಮೇಲೆ ದೆಹಲಿಯ ಚುನಾಯಿತ ಸರ್ಕಾರ ಅಧಿಕಾರ ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಮೇ 11 ರಂದು ತೀರ್ಪು ನೀಡಿತ್ತು. ಸುಪ್ರೀಂ ಆದೇಶವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಕಳೆದ ಮೇ ತಿಂಗಳಲ್ಲಿ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version