ಔರಾದ್: ಜುಲೈ 19 ರಂದು ಪತ್ರಿಕಾ ದಿನಾಚರಣೆ: ಶಿವಾನಂದ ಮೊಕ್ತೆದಾರ್

ಔರಾದ್ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇದೇ ಜುಲೈ 19 ರಂದು ಬೆಳಿಗ್ಗೆ 10:30 ಗಂಟೆಗೆ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ದಿನಾಚರಣೆ ಆಚರಿಸಲಾಗುತ್ತಿದೆ. ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ.
ಹಿರೇಮಠ ಸಂಸ್ಥಾನದ ಶ್ರೀಗಳಾದ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸುವರು. ಸಂಸದ ಸಾಗರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಪ್ರಭು ಚವ್ಹಾಣ ಸಸಿ ನೆಡುವ ಮೂಲಕ ಚಾಲನೆ ನೀಡುವರು. ತಹಸೀಲ್ದಾರ ಮಲ್ಲಶೆಟ್ಟಿ ಚಿದ್ರೆ, ತಾಪಂ ಇಓ ಬಿರೇಂದ್ರಸಿಂಗ್ ಠಾಕೂರ್, ಸಹಾಯಕ ನಿರ್ದೇಶಕರಾದ ಶಿವಕುಮಾರ ಘಾಟೆ, ಸುದೇಶ, ಸಿಪಿಐ ರಘುವೀರಸಿಂಗ್ ಠಾಕೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಘದ ತಾಲೂಕು ಉಪಾಧ್ಯಕ್ಷ ಮನ್ಮಥ ಸ್ವಾಮಿ ಪ್ರಾಸ್ತಾವಿಕ ಮಾತನಾಡುವರು.
ಸಂಘದ ಪ್ರಧಾನ ಕಾರ್ಯದರ್ಶಿ ಸುನಿಲ ಜಿರೋಬೆ ಆಶಯ ನುಡಿ ನುಡಿಯಲಿದ್ದಾರೆ. ಪತ್ರಕರ್ತ ರಿಯಾಜ್ ಪಾಶಾ ಸ್ವಾಗತಿಸುವರು. ಪತ್ರಕರ್ತ ಪರಮೇಶ ವಿಳಾಸಪೂರೆ ನಿರೂಪಿಸುವರು. ಪತ್ರಕರ್ತ ಮಲ್ಲಪ್ಪ ಗೌಡಾ ವಂದಿಸುವರು.
ವರದಿ: ರವಿಕುಮಾರ ಸಿಂಧೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97