ಸಿಎಂ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಪಿಡಿಓಗಳಿಗೆ ಒತ್ತಡ ಹಾಕುವುದು ನಾಚಿಗೇಡಿನ ಸಂಗತಿ: ಬಿಎಸ್ಪಿ ಆಕ್ರೋಶ
ಚಾಮರಾಜನಗರ: ನಗರದಲ್ಲಿ ಡಿ. 12 ರಂದು ನಡೆಯುವ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಒಂದೊಂದು ಬಸ್ ಗಳಲ್ಲಿ ಜನರನ್ನು ಕರೆತರಬೇಕೆಂದು ಅಧಿಕಾರಿಗಳ ಮೂಲಕ ಪಿಡಿಓಗಳಿಗೆ ಒತ್ತಡ ಹಾಕುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕು ಸಂಯೋಜಕ ಎಸ್.ಪಿ.ಮಹೇಶ್, ಅಧ್ಯಕ್ಷ ಅಮಚವಾಡಿ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಅಭಿವೃದ್ದಿ ಸಂಪೂರ್ಣ ಕುಂಠಿತವಾಗಿದ್ದು, ರಾಷ್ರೀಯ ಹೆದ್ದಾರಿ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಇದರಿಂದ ಅನೇಕ ಸಾವು, ನೋವು ಸಂಭವಿಸಿದೆ. ಸರ್ಕಾರದಿಂದ ಮಂಜೂರಾಗಿರುವ ಮನೆಗಳಿಗೆ ಇನ್ನೂ ಬಿಲ್‌ಗಳು ಆಗಿಲ್ಲ. ಅಪೂರ್ಣ ಹಂತದಲ್ಲೇ ಫಲಾನುಭವಿಗಳು ತುಂಬಾ ಸಂಕಷ್ಠದಲ್ಲಿ ಸಿಲುಕಿದ್ದಾರೆ. ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಅಧಿಕಾರಿಗಳು ಪಿಡಿಓಗಳ ಮೇಲೆ ಒತ್ತಡ ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೊಳವಿಬಾವಿ ಕೊರೆಸಲು ಟೆಂಡರ್ ಕರೆದಿಲ್ಲ. ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿಲ್ಲ. ಇಂತಹ ಸಂದರ್ಭದಲ್ಲಿ ಯಾವ ಮುಖಹೊತ್ತು ಮುಖ್ಯಮಂತ್ರಿಗಳು ಚಾಮರಾಜನಗರಕ್ಕೆ ಬರುತ್ತಿದ್ದಾರೆ. ಇದೊಂದು ಚುನಾವಣೆ ಗಿಮಿಕ್ ಆಗಿದೆ ಎಂದು ದೂರಿದ್ದಾರೆ.
ರಂಗಸ್ವಾಮಿ, ಶಿವಣ್ಣ, ಕಾಂತರಾಜು, ಭೈರ್‌ಲಿಂಗಸ್ವಾಮಿ ಇತರರು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























