7:40 PM Thursday 16 - October 2025

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಕತ್ತು ಕೊಯ್ದು ಕೊಲೆಗೈದ ಪತಿ

shaline
29/01/2022

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ.

ಶಾಲಿನಿ (32) ಕೊಲೆಯಾದ ಮಹಿಳೆ. ಸುರೇಶ್ ಪತ್ನಿಯನ್ನು ಕೊಂದ ಪತಿ. ಸುರೇಶ್ ಮತ್ತು ಶಾಲಿನಿ ಕಳೆದ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಹೊಂದಾಣಿಕೆ ಕೊರತೆಯಿಂದಾಗಿ ದಂಪತಿ 4 ವರ್ಷದ ಹಿಂದೆ ವಿಚ್ಛೇದನ ಪಡೆದಿದ್ದರು. ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ವಾಸವಾಗಿದ್ದರು.

ಪತ್ನಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಖಿನ್ನತೆಗೆ ಒಳಗಾಗಿದ್ದ ಸುರೇಶ್​, ಪತ್ನಿ ಕೆಲಸ ಮುಗಿಸಿ ಬರುತ್ತಿದ್ದಾಗ ಕತ್ತು ಕೊಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದಾನೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಬ್‌ ಜಿ ಪ್ರಭಾವ: ಕುಟುಂಬದವರನ್ನೇ ಹತ್ಯೆ ಮಾಡಿದ ಬಾಲಕ

ಯಡಿಯೂರಪ್ಪನವರ ಮೊಮ್ಮಗಳ ಆತ್ಮಹತ್ಯೆಗೆ ಕಾರಣ ಏನು?

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ

ಎಸ್ಸಿ-ಎಸ್ಟಿಗೆ ಬಡ್ತಿ ಮೀಸಲಾತಿ: ಮಾನದಂಡ ಹಾಕಲು ಸುಪ್ರೀಂ ಕೋರ್ಟ್‌ ನಿರಾಕರಣೆ

ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು

 

ಇತ್ತೀಚಿನ ಸುದ್ದಿ

Exit mobile version