ಪ್ರೇಯಸಿಯನ್ನು ಗೋವಾ ಬೀಚ್ ಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಯುವಕ! - Mahanayaka

ಪ್ರೇಯಸಿಯನ್ನು ಗೋವಾ ಬೀಚ್ ಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಯುವಕ!

20/05/2022

ಪಣಜಿ: ಯುವಕನೋರ್ವ ಪ್ರೀತಿಸಿದ ಯುವತಿಯನ್ನು ಗೋವಾಕ್ಕೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

26 ವರ್ಷ ವಯಸ್ಸಿನ ಕಿಶನ್ ಕಲಂಗುಡ್ಕರ್ ಬಂಧಿತ ಆರೋಪಿಯಾಗಿದ್ದಾನೆ. ಈತ ದಕ್ಷಿಣ ಗೋವಾದ ವೆಲ್ ಸೋನ್ ಬೀಚ್ ಗೆ ಕರೆದೊಯ್ದು ತನ್ನ ಪ್ರೇಯಸಿಯನ್ನು ಹತ್ಯೆ ಮಾಡಿದ್ದಾನೆ.

ಕಾಲೇಜು ದಿನಗಳಿಂದಲೇ ಇಬ್ಬರು ಕೂಡ ಪ್ರೀತಿಸುತ್ತಿದ್ದರು. ಆದರೆ ಕೆಲವು ದಿನಗಳಿಂದ ಯುವತಿ ಕಿಶನ್ ಜೊತೆಗೆ ಸಂಪರ್ಕದಲ್ಲಿರಲಿಲ್ಲ ಎನ್ನಲಾಗಿದೆ. ಇದರಿಂದ ಕಿಶನ್ ತೀವ್ರವಾಗಿ ಆಕ್ರೋಶಗೊಂಡಿದ್ದು, ತನ್ನ ಪ್ರೇಯಸಿಯನ್ನು ಗೋವಾಕ್ಕೆ ಹೋಗುತ್ತಿರುವುದಾಗಿ ನಂಬಿಸಿದ್ದು, ಗೋವಾ ಬೀಚ್ ಗೆ ಆಕೆ ಬರುತ್ತಿದ್ದಂತೆಯೇ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ.

ಇತ್ತ ಬೀಚ್ ನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರ ತನಿಖೆ ಆರಂಭಿಸಿದ್ದು, ಈ ವೇಳೆ ಕಿಶನ್ ನ ಸುಳಿವು ಲಭ್ಯವಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಯಸಿಯನ್ನು ಬೀಚ್ ಗೆ ಕರೆದೊಯ್ದಿದ್ದ ಕಿಶನ್, ನನ್ನ ಜೊತೆಗೆ ಸಂಬಂಧವನ್ನು ಮುಂದುವರಿಸಬೇಕು ಎಂದು ಆಕೆಯನ್ನು ಒತ್ತಾಯಿಸಿದ್ದ. ಇದನ್ನು ಆಕೆ ಒಪ್ಪದಿದ್ದಾಗ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣ ನಡೆದು 24 ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ

ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಮುಂದಕ್ಕೆ ಚಲಿಸಿ ಎಂದ ಗೂಗಲ್ ಮ್ಯಾಪ್: ಹೊಳೆಗೆ ಕಾರು ಇಳಿಸಿದ ಚಾಲಕ

ವಿಶ್ವಕ್ಕೆ ಆತಂಕ ಸೃಷ್ಟಿಸಿದ ಮಂಕಿ ಪಾಕ್ಸ್: ಮೂರು ದೇಶಗಳಲ್ಲಿ ರೋಗ ಪತ್ತೆ | ಇದರ ಲಕ್ಷಣಗಳೇನು?

ಸೋಲಿಲ್ಲದ ಸರದಾರ ಬಾಕ್ಸರ್ ಮೂಸಾ ಅಸ್ಕಾನ್ ರಿಂಗ್ ನಲ್ಲೇ ಹೃದಯಾಘಾತದಿಂದ ನಿಧನ

 

 

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ