ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿಕೊಟ್ಟ ಪ್ರಧಾನಿ ಮೋದಿ
ನವದೆಹಲಿ: ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿಮೆ ಮಾಡಿದ್ದಾರೆ. ಇದರಿಂದ ಗ್ಯಾಸ್ ಬೆಲೆ ಇಳಿಕೆಯಿಂದ ಸ್ವಲ್ಪ ಮಟ್ಟಿಗೆ ಜನರ ಮೇಲಿನ ಹೊರೆ ಕಡಿಮೆಯಾಗಲಿದೆ.
ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ‘ಸುಲಭವಾಗಿ ಬದುಕುವ’ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಚುನಾವಣೆ ಬಳಿಕ ಮತ್ತೆ ಏರಿಕೆಯಾಗುವುದೋ ಎಂದು ಕಾದುನೋಡಬೇಕಿದೆ.

























