ಏ.14ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿ: ನಳಿನ್ ಕುಮಾರ್ ಕಟೀಲ್

ಉಡುಪಿ: ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಏಪ್ರಿಲ್ 14ರಂದು ಸಂಜೆ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಈ ಸಮಾವೇಶದಲ್ಲಿ ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಉಡುಪಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿಯವರ ಕಾರ್ಯಕ್ರಮದಿಂದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಈಶ್ವರಪ್ಪನವರ ಬಂಡಾಯದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ನಮ್ಮ ಕಟ್ಟಾಳು, ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಗೆ ಅವರು ಕಾರಣಕರ್ತರಾದವರು ಎಂದರಲ್ಲದೇ, ಸಹಜವಾಗಿಯೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಈಶ್ವರಪ್ಪ ಪರ ಪರೋಕ್ಷವಾಗಿ ಬ್ಯಾಟಿಂಗ್ ಮಾಡಿದರು.
ಇನ್ನೂ ದಿಂಗಾಲೇಶ್ವರ ಶ್ರೀ ವಿವಾದದ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಬಂದಾಗ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ದಿಂಗಾಲೇಶ್ವರ ಸ್ವಾಮಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಇದರ ಲಾಭ ಪಡೆಯುತ್ತಿದೆ ಎಂದರೆ ಆ ಪಕ್ಷದ ವೈಫಲ್ಯತೆ ಕಾಣುತ್ತದೆ ಎಂದು ಟೀಕಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth